ಶ್ರೀಗಂಧದ ಮರ ಕಳವು
ಕಲಬುರಗಿ,ಸೆ.23-ನಗರದ ಜಗತ್ ವೃತ್ತದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಆವರಣದಲ್ಲಿದ್ದ ಒಂದು ಶ್ರೀಗಂಧದ ಮರವನ್ನು ಕಳ್ಳರು ಕತ್ತರಿಸಿಕೊಂಡು ಹೋಗಿದ್ದಾರೆ ಎಂದು ಭೀಮ ನಗರದ ಸಂದೀಪ್ ಭರಣಿ ಅವರು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
5 ಸಾವಿರ ರೂಪಾಯಿ ಬೆಲೆ ಬಾಳುವ ಶ್ರೀಗಂಧದ ಮರವನ್ನು ಕಳ್ಳರು ಕತ್ತರಿಸಿಕೊಂಡು ಹೋಗಿದ್ದು, ಶ್ರೀಗಂಧದ ಮರ ಕಳವು ಮಾಡಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಅವರು ಮನವಿ ಮಾಡಿದ್ದಾರೆ.
ಗಾಂಜಾ ಜಪ್ತಿ
ನಗರದ ಬಸವೇಶ್ವರ ಕಾಲೋನಿಯ ಸಾರ್ವಜನಿಕ ಉದ್ಯಾನವನದ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇಲೆ ಎಂ.ಬಿ.ನಗರ ಪೊಲೀಸ್ ಠಾಣೆ ಪಿಐ ಶಿವಾನಂದ ಎಸ್.ವಾಲಿಕಾರ ಮತ್ತು ಸಿಬ್ಬಂದಿ ದಾಳಿ ನಡೆಸಿ ಮಹ್ಮದ್ ಬಿಲಾಲ್ ತಂದೆ ಅಲ್ಲಾಭಕ್ಷ (53) ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 1520 ರೂ.ಮೌಲ್ಯದ 152.73 ಗ್ರಾಂ.ಗಾಂಜಾ ಜಪ್ತಿ ಮಾಡಿದ್ದಾರೆ.