ನಾಳೆಯಿಂದ ಮಾವು, ಹಲಸು ಮೇಳ
ಸಂಜೆವಾಣಿ ನ್ಯೂಸ್
ಮೈಸೂರು,ಮೇ23:- ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಕುಪ್ಪಣ್ಣ ಪಾರ್ಕ್‍ನಲ್ಲಿ ಮೇ 24ರಿಂದ 26ರವರೆಗೆ ಮಾವು ಮೇಳ ಆಯೋಜಿಸಲಾಗಿದ್ದು, ಒಂದೇ ಸೂರಿನಡಿ ತರಹೇವಾರಿ ಮಾವಿನ ಹಣ್ಣುಗಳನ್ನು ರೈತರಿಂದ ನೇರವಾಗಿ ಗ್ರಾಹಕರು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಸಂಬಂಧÀ ನಗರ ಕರ್ಜನ್ ಪಾರ್ಕ್ ಆವರಣದಲ್ಲಿರುವ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ಬುಧÀವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ ಅಂಗಡಿ, ಮಧÀ್ಯವರ್ತಿಗಳ ಹಾವಳಿ ತಪ್ಪಿಸಿ, ಮಾವು ಬೆಳೆಗಾರರಿಗೆ ಉತ್ತಮ ದರ ದೊರಕುವಂತೆ ಮಾಡುವುದು ಹಾಗೂ ಗ್ರಾಹಕರು ನ್ಯಾಯಯುತ ಬೆಲೆಯಲ್ಲಿ ಹಣ್ಣುಗಳನ್ನು ಖರೀದಿಸಲು ಉತ್ತೇಜನ ನೀಡುವ ಉz್ದÉೀಶದೊಂದಿಗೆ ತೋಟಗಾರಿಕೆ ಇಲಾಖೆ ಹಲವು ವರ್ಷಗಳಿಂದ ಮಾವು ಮತ್ತು ಹಲಸು ಮೇಳ ಆಯೋಜಿಸುತ್ತಿದೆ. ಅದರಂತೆ ಈ ಬಾರಿಯೂ ಮುಂದುವರೆಸಿದ್ದು, ತೋಟಗಾರಿಕೆ ಇಲಾಖೆ, ಜಿಲ್ಲಾ ಹಾಪ್‍ಕಾಮ್ಸ್ ವತಿಯಿಂದ ನಗರದ ಕುಪ್ಪಣ್ಣ ಪಾರ್ಕ್ ಆವರಣದಲ್ಲಿ ಮೇ 24, 25 ಮತ್ತು 26ರಂದು ಮಾವು ಮಾರಾಟ ಮತ್ತು ಪ್ರದಶರ್Àನ ಮೇಳ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮೂರು ದಿನಗಳ ಕಾಲ ನಡೆಯುವ ಈ ಮೇಳದಲ್ಲಿ ಮಾವಿನ ಹಣ್ಣುಗಳೊಂದಿಗೆ ಹಲಸಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟವೂ ಇರಲಿದೆ. ಮೈಸೂರು ಜಿಲ್ಲೆಯ ರೈತರೊಂದಿಗೆ ನೆರೆಯ ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ರಾಮನಗರ 30ಕ್ಕೂ ಹೆಚ್ಚು ರೈತರು ಮೇಳದಲ್ಲಿ ಪಾಲ್ಗೊಂಡು ತಾವು ಬೆಳೆದ ಹಣ್ಣುಗಳನ್ನು ಮಾರಾಟ ಮಾಡಲಿದ್ದಾರೆ ಎಂದು ತಿಳಿಸಿದರು.
8ರಿಂದ 10 ತಳಿಗಳ ಪ್ರದರ್ಶನ: ಮೇಳದಲ್ಲಿ ಬಾದಾಮಿ, ರಸಪುರಿ ಜತೆಗೆ ಮಲಗೋವ, ಮಲ್ಲಿಕಾ, ಸಿಂಧೂರ, ತೋತಾಪುರಿ, ಬಾಗನಪಲ್ಲಿ, ದಶೇರಿ, ಕಾಲಾಪ ಹಾಡ್, ಕೇಸರ್, ಸಕ್ಕರೆಗುತ್ತಿ, ಆಮ್ರಪಾಲಿ, ದಿಲ್‍ಪಸಂದ್ ಸೇರಿದಂತೆ ಹಲವು ತಳಿಯ ಹಣ್ಣುಗಳು ಇರಲಿವೆ. ಒಂದೊಂದು ತಳಿಯ ಮಾವಿಗೂ ಹಾಪ್‍ಕಾಮ್ಸ್‍ನಲ್ಲಿ ನಿಗದಿಪಡಿಸಿರುವ ಬೆಲೆಯಂತೆ ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರಿಸಿದರು.
ನೈಸರ್ಗಿಕ ಹಣ್ಣುಗಳಿಗೆ ಆದ್ಯತೆ: ಮೇಳದಲ್ಲಿ ಭಾಗವಹಿಸುವ ರೈತರಿಗೆ ನೈಸರ್ಗಿಕವಾಗಿ ಹಣ್ಣಾಗಿಸಿದ ಫಲಗಳನ್ನಷ್ಟೇ ತರುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜನರ ಆರೋಗ್ಯದ ದೃಷ್ಟಿಯಿಂದ ಕ್ಯಾಲ್ಸಿಯಂ ಕಾರ್ಬೈಡ್ ಮುಕ್ತ, ನೈಸರ್ಗಿಕವಾಗಿ ಮಾಗಿಸಿದ ಉತ್ಕøಷ್ಟ ದರ್ಜೆಯ ವಿವಿಧÀ ತಳಿಯ ಹಣ್ಣುಗಳು ಮೇಳದಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲಾಗಿದೆ ಎಂದರು.
35 ಮಳಿಗೆ ವ್ಯವಸ್ಥೆ: ಕುಪ್ಪಣ್ಣ ಪಾರ್ಕ್‍ನಲ್ಲಿ ಮಾವು ಮಾರಾಟ ಮತ್ತು ಪ್ರದರ್ಶನಕ್ಕೆ 35 ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿಯ ಮಾವು ಮೇಳದಲ್ಲಿ 150 ಟನ್ ಮಾವಿನ ಹಣ್ಣ ಮಾರಾಟವಾಗಿತ್ತು. ಈ ಬಾರಿ ಈ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧÀ್ಯತೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ಶಶಿಧರ್, ಅಶ್ವಿನಿ ಹಾಗೂ ಜಿಲ್ಲಾ ಹಾಪ್‍ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಚೇತನ್ ಇದ್ದರು.