ಸಾಲುಂಡಿಗೆ ಸಚಿವ ಮಹದೇವಪ್ಪ ಭೇಟಿ
ಸಂಜೆವಾಣಿ ನ್ಯೂಸ್
ಮೈಸೂರು,ಮೇ23:- ತಾಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿನೆಯಿಂದ ಒಬ್ಬರು ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಹಿನ್ನೆಲೆ ಜಿ¯್ಲÁ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬುಧÀವಾರ ಗ್ರಾಮಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಗ್ರಾಮದ ಸರ್ಕಾರಿ ಶಾಲೆಯಲ್ಲಿ ತೆರೆದಿರುವ ತಾತ್ಕಾಲಿಕ ವೈದ್ಯಕೀಯ ಕ್ಯಾಂಪ್‍ಗೆ ಭೇಟಿ ನೀಡಿದ ಅವರು, ಜಿ¯್ಲÁ ಆರೋಗ್ಯಾಧಿಕಾರಿ ಅವರಿಂದ ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕುಡಿಯುವ ನೀರು ಕಲುಷಿತಗೊಂಡ ಹಿನ್ನೆಲೆ ಗ್ರಾಮಸ್ಥರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡು ಅನೇಕರು ಅಸ್ವಸ್ಥರಾಗಿz್ದÁರೆ. ಇವರಿಗೆ ಕಾಲರಾದ ಲP್ಷÀಣಗಳು ಕಾಣಿಸಿಕೊಂಡಿವೆ ಎಂದರು.
ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ನೀಡುವಂತೆ ಸೂಚಿಸಿz್ದÁರೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ಕಲುಷಿತ ನೀರು ಸೇವಿಸಿ ಮೃತಪಟ್ಟ ಯುವಕ ಕನಕರಾಜು ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ಕುಟುಂಬಕ್ಕೆ ಸರ್ಕಾರದ ವತಿಯಿಂದ 2 ಲP್ಷÀ ರೂ. ಪರಿಹಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭ ಶಾಸಕರಾದ ಕೆ.ಹರೀಶ್ ಗೌಡ, ಮುಡಾ ಅಧÀ್ಯP್ಷÀ ಕೆ.ಮರೀಗೌಡ ಹಾಗೂ ಸ್ಥಳೀಯ ಮುಖಂಡರು ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.