ಪರಿಹಾರಧನ ನೀಡಲು ಆಗ್ರಹಿಸಿ ಮನವಿ
ಬಾದಾಮಿ,ಮೇ.22: ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರ ಇವರ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವುದು ಹಾಗೂ ಕೊಲೆಯಾದ ಯುವತಿಯ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಧನ ಒದಗಿಸಲು ಆಗ್ರಹಿಸಿ ತಾಲೂಕಾ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಅಡಿವೆಪ್ಪ ಅರಬೂತನವರ ನೇತೃತ್ವದಲ್ಲಿ ಮುಖ್ಯಮಂತ್ರಿ ಹಾಗೂ ಗೃಹಸಚಿವರಿಗೆ ತಹಶೀಲದಾರ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಡಿವೆಪ್ಪ ಅರಬೂತನ್ನವರ ಮಾತನಾಡಿ
ಹುಬ್ಬಳ್ಳಿ ವೀರಾಪೂರ ಓಣಿಯ ಯುವತಿ ಅಂಜಲಿ ಅಂಬಿಗೇರ ಇವರನ್ನು ಅಮಾನುಷವಾಗಿ ಚಾಕುವಿನಿಂದ ಹತ್ಯೆಗೈದ ವಿಶ್ವ ಅಲಿಯಾಸ ಗಿರೀಶ ಸಾವಂತನಿಗೆ ಗಲ್ಲುಶಿಕ್ಷೆ ವಿಧಿಸಬೇಕು ಮತ್ತು ಕೊಲೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಧನ ಒದಗಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ತಾಲೂಕ ನಿಜಶರಣ ಶ್ರೀ ಅಂಬಿಗ ಚೌಡಯ್ಯ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಸದಸ್ಯರು ಸಮಾಜ ಬಾಂಧವರು ಹಾಜರಿದ್ದರು.