ಮರಿಯಾಲ ಮಠಕ್ಕೆ ಮರಿತಿಬ್ಬೇಗೌಡ ಭೇಟಿ : ಶ್ರೀಗಳಿಂದ ಆಶೀರ್ವಾದ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ.21- ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಮರಿಯಾಲದ ಮಠಕ್ಕೆ ಭೇಟಿ ನೀಡಿ, ಅಲ್ಲಿನ ಮಠಾಧ್ಯಕ್ಷರಾದ ಶ್ರೀ ಇಮ್ಮಡಿ ಮುರುಘರಾಜೇಂದ್ರಸ್ವಾಮಿಗಳಿಂದ ಆರ್ಶೀವಾದ ಪಡೆದರು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ಅವರು ಚಾಮರಾಜನಗರ ತಾಲೂಕಿನಲ್ಲಿ ಚುನಾವಣಾ ಪ್ರಚಾರ ಹಾಗೂ ಶಿಕ್ಷಕರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು. ಇದಕ್ಕು ಮುನ್ನಾ ಶ್ರೀಮಠಕ್ಕೆ ಭೇಟಿ ನೀಡಿ, ಹಿರಿಯ ಶ್ರೀಗಳ ಗದ್ದಗೆಗೆ ನಮಸ್ಕಾರ ಮಾಡಿದರು. ಬಳಿಕ ಶ್ರೀಮಠಾಧ್ಯಕ್ಷರಾದ ಇಮ್ಮಡಿ ಮುರುಘರಾಜೇಂದ್ರ ಸ್ವಾಮಿಗಳಿಗೆ ಶಾಲು ಹೊದಿಸಿ, ಹಾರ ಹಾಕಿ ಫಲತಾಂಬಲು ನೀಡಿ ಸನ್ಮಾನಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮರಿತಿಬ್ಬೇಗೌಡರು, ಐದನೇ ಬಾರಿಗೆ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಆಯ್ಕೆ ಸ್ಪರ್ಧೆ ಮಾಡಿದ್ದು, ತಾವು ಅಶೀರ್ವಾದ ಮಾಡಬೇಕು. ತಮ್ಮ ಸಂಸ್ಥೆಯ ಶಿಕ್ಷಕರ ಬಂಧುಗಳು ಮೊದಲ ಪ್ರಾಶಸ್ತ್ಯ ಮತವನ್ನು ನನಗೆನೀಡುವಂತೆ ಸೂಚನೆ ನೀಡಬೇಕು. ತಮ್ಮೆಲ್ಲರ ಆರ್ಶಿವಾದದಿಂದ ಆಯ್ಕೆಯಾದರೆ, ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ದಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯ ಪ್ರಗತಿಗೆ ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ, ಉಪನ್ಯಾಸಕ ಆಶೋಕ, ಮಂಜುನಾಥ್, ಮುಖಂಡರಾದ ಬಳ್ಳಾರಿ ಗೌಡ, ಷಡಕ್ಷರಿ ಇತರರು ಇದ್ದರು.