ಜನ್ಮದಿನದ ಅಂಗವಾಗಿ ಹಣ್ಣು ಹಂಪಲು ವಿತರಣೆ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಮೇ.22: ಆರ್.ಟಿ.ಓ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರು ಹಾಗು ಸಮಾಜಸೇವಕರಾದ ಆಲಂಬಾಡಿಕಾವಲು ಮಲ್ಲಿಕಾರ್ಜುನ್ ಹುಟ್ಟುಹಬ್ಬದ ಅಂಗವಾಗಿ ಪುರಸಭಾ ಮಾಜಿ ಸದಸ್ಯರಾದ ಕೆ.ಎನ್.ಕಿರಣ್ (ಗುಂಡ) ನೇತೃತ್ವದಲ್ಲಿ ಪಟ್ಟಣದಲ್ಲಿರುವ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳ ಹೊರ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಪುರಸಭೆಯ ಮಾಜಿ ಸದಸ್ಯರಾದ ಕೆ.ಎನ್.ಕಿರಣ್ (ಗುಂಡ) ಮಾತನಾಡಿ ತಾಲ್ಲೂಕಿನಾದ್ಯಂತ ಸಮಾಜ ಸೇವೆಯನ್ನು ಕಳೆದ ಮೂರು ವರ್ಷಗಳಿಂದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಆರ್ಥಿಕ ಸಹಾಯ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ, ಬಡರೋಗಿಗಳ ಚಿಕಿತ್ಸೆಗೆ ನೆರವು, ವಾಲಿಬಾಲ್, ಕ್ರಿಕೆಟ್ ಪಂದ್ಯಾವಳಿ ಗಳಿಗೆ ಆರ್ಥಿಕ ನೆರವು, ಪೌರಾಣಿಕ ನಾಟಕಗಳಿಗೆ ಪೆÇ್ರೀತ್ಸಾಹ ನೀಡುವುದಲ್ಲದೆ ಕಲಾವಿದರನ್ನು ಗೌರವಿಸುವುದು.ಉನ್ನತ ವ್ಯಾಸಂಗವನ್ನು ಮಾಡುವ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು. ಅಲ್ಲದೆ ಅವರ ಹುಟ್ಟುಹಬ್ಬದ ಅಂಗವಾಗಿ ತಾಲ್ಲೂಕಿನ ಎಲ್ಲಾ ಸರ್ಕಾರಿ ಪ್ರೌಢಶಾಲೆಯ ಪರೀಕ್ಷೆಯಲ್ಲಿ ಹಾಗೂ
ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಕಲೆ,ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳನ್ನು ಗಳಿಸಿದ ಪ್ರತಿ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡುತ್ತಾ ನಿರಂತರವಾಗಿ ಮಾಡುತ್ತ ಬರುತ್ತಿರುವ ಅವರಿಗೆ ಭಗವಂತ ಹೆಚ್ಚಿನ ಆರೋಗ್ಯ ಆಯಸ್ಸನ್ನು ನೀಡಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಮಾಜ ಸೇವೆಯನ್ನು ಮಾಡಲು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶಶಿಧರ್, ಡಾ.ಹರೀಶ್, ಕರವೇ ಕಾಂತರಾಜು, ಅಕ್ಕಿಹೆಬ್ಬಾಳು ಜಯಶಂಕರ್ ಗುರೂಜಿ,ಹೊಸಹೊಳಲು ಸಚಿನ್, ಬಿಎಂಟಿಸಿ ಲೋಕೇಶ್, ಮಾಂಬಳ್ಳಿ ಚೇತನ್, ಕೊಮ್ಮೇನಹಳ್ಳಿ ಅನಿಲ್, ಸುನಿಲ್, ಶಶಿಧರ್, ದರ್ಶನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.