ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಂಜೆವಾಣಿ ನ್ಯೂಸ್
ಮೈಸೂರು, ಮೇ 22:- ಭಾರತಿ ತೀರ್ಥ ಮಹಾಸ್ವಾಮಿಗಳ 50ನೇ ವರ್ಷದ ಸನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವದ ಸಂಭ್ರಮಾಚರಣೆ ಅಂಗವಾಗಿ ನಗರದ ಶಂಕರ ಮಠದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.
ಶೃಂಗೇರಿ ಶಾರದಾ ಪೀಠ, ಶಂಕರ ಮಠ, ಅಭಿನವ ಶಂಕರಾಲಯ ಹಾಗೂ ಮೈಸೂರು ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘದ ವತಿಯಿಂದ ಎಎಸ್‍ಜಿ ಕಣ್ಣಿನ ಆಸ್ಪತ್ರೆ ಹಾಗೂ ಡಿಆರ್‍ಎಂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಟಿ.ಎಸ್.ಶ್ರೀವತ್ಸ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಚಾಲನೆ ನೀಡಿದರು. ಸುಮಾರು 500ಕ್ಕೂ ಹೆಚ್ಚು ಮಠದ ಭಕ್ತರು ಹಾಗೂ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಮಠದ ವ್ಯವಸ್ಥಾಪಕ ಶೇಷಾದ್ರಿ ಭಟ್, ಮೈಸೂರು ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಮೈಸೂರು ಗ್ರಾಮಾಂತರ ಬ್ರಾಹ್ಮಣ ಸಂಘದ ಅಧ್ಯಕ್ಷ ಗೋಪಾಲ್ ರಾವ್, ಮಠದ ಸೇವಾಕರ್ತೃಗಳಾದ ಎಸ್.ರಂಗನಾಥ, ಹರೀಶ್, ಎಮ್.ಆರ್.ಬಾಲಕೃಷ್ಣ, ಶ್ರೀನಾಥ್, ಪ್ರಶಾಂತ್, ಮೀನಾಕ್ಷಿ, ಜ್ಯೋತಿ, ಬಾಬು, ಮಂಜುನಾಥ್, ಎಎಸ್‍ಜಿ ಕಣ್ಣಿನ ಆಸ್ಪತ್ರೆ ಹಾಗೂ ಡಿಆರ್‍ಎಂ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.