ಅರ್ಹರಿಗೆ ಪಂಚ ಗ್ಯಾರಂಟಿ ಯೋಜನೆಯ ಲಾಭ ದೊರಕಿಸಿ: ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ
ವಿಜಯಪುರ,ಸೆ.23: ಸರ್ಕಾರದ ಮಹತ್ವಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಯುವನಿಧಿಯಿಂದ ರಾಜ್ಯದ ಎಲ್ಲಾ ವರ್ಗದವರ ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸದಂತಹ ಹಲವು ರೂಪದಲ್ಲಿ ಸಹಕಾರಿಯಾಗಿದ್ದು, ಅರ್ಹರಿಗೂ ಈ ಯೋಜನೆಗಳ ಲಾಭ ದೊರಕಿಸಿ ಯಾರೂ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವÀ ಡಾ. ಎಂ.ಬಿ. ಪಾಟೀಲ ಹೇಳಿದರು.
ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲಾ ಪಂಚಾಯತಿಯ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿಯ ನೂತನ ಕಚೇರಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕಳೆದ ಬಾರಿಯ ನಮ್ಮ ಸರ್ಕಾರದ ಅವಧಿಯಲ್ಲಿ ನೀಡಿದ 165 ಭರವಸೆಯಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೇ, ಹೊಸದಾಗಿ 30 ಯೋಜನೆಗಳನ್ನು ಸೇರಿಸಿ 188 ಭರವಸೆಗಳನ್ನು ಪೂರೈಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೇಳಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯು, ತಾಲೂಕಾ ಹಾಗೂ ಗ್ರಾಮ ಮಟ್ಟದಲ್ಲಿ ಸಭೆ ನಡೆಸಿ ಸಮರ್ಪಕ ಹಾಗೂ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವುದರ ಮೂಲಕ ಅರ್ಹರಿಗೆ ಈ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವಲ್ಲಿ ಕಾರ್ಯನಿರತರಾಗಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಈವರೆಗೆ ಶಕ್ತಿ ಯೋಜನೆಯಡಿ 8,33,26,000 ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಪೂರೈಸುವ ಗೃಹಜ್ಯೋತಿ ಯೋಜನೆಗೆ ಜಿಲ್ಲೆಯಲ್ಲಿ 4,70,985 ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 15,82,022 ಫಲಾನುಭವಿಗಳಿದ್ದಾರೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 4,99,849 ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂನಂತೆ ಈವರೆಗೆ ಒಟ್ಟು 100181.24 ಲಕ್ಷ ರೂ ಅನುದಾನವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 14,984 ಪದವೀಧರರು, 84 ಡಿಪ್ಲೋಮಾ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ ಮಾತನಾಡಿ, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಒತ್ತು ನೀಡಿದ್ದು, ಶಕ್ತಿ, ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳನ್ನು ಕಟ್ಟ ಕಡೆಯ ಜನರಿಗೂ ತಲುಪಿಸುವಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಕಾರ್ಯನಿರ್ವಹಿಸಿ ತಮಗೆ ಒದಗಿಸಿರುವ ಜವಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಶಾಸಕ ವಿಠಲ ಕಟಕದೊಂಡ ಮಾತನಾಡಿ, ಪಂಚಗ್ಯಾರಂಟಿ ಯೋಜನೆಗಳು ಎಲ್ಲರನ್ನು ಒಳಗೊಂಡ ಸಾಮೂಹಿಕ ಹಾಗೂ ಸರ್ವವ್ಯಾಪಿ ಯೋಜನೆಗಳಾಗಿದ್ದು, ಎಲ್ಲ ವರ್ಗದವರಿಗೂ ಅನುಕೂಲ ಕಲ್ಪಿಸಿವೆ ಎಂದು ಹೇಳಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಯೋಜನೆಯ ಫಲಾನುಭವಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮೆಹಜನಬಿ ಹೊರ್ತಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷÀ ಇಲಿಯಾಸ್ ಅಹ್ಮದ್ ಬೋರಮಣಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯಕುಮಾರ ಅಜೂರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು, ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.