ಅಕ್ರಮ ನಳದ ಸಂಪರ್ಕ ಹೊಂದಿರುವವರುನಿಗದಿತ ಶುಲ್ಕ ಪಾವತಿಸಿ ಸಕ್ರಮಗೊಳಿಸಿಕೊಳ್ಳಲು ಸೂಚನೆ
ಕಲಬುರಗಿ:ಮೇ.21:ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯಡಿ ಕಲಬುರಗಿ ನಗರದಲ್ಲಿ 24×7 ನಿರಂತರ ನೀರು ಸರಬರಾಜು ಕಾಮಗಾರಿಗಳನ್ನು ಅನುಷ್ಠಾನಗೊಳ್ಳುತ್ತಿದ್ದು, ಕಲಬುರಗಿ ನಗರದ ಅಕ್ರಮ ನಳ ಸಂಪರ್ಕ ಹೊಂದಿರುವ ಗ್ರಾಹಕರು ನಿಗದಿತ ಠೇವಣಿ ಹಾಗೂ ಇನ್ನಿತರ ಶುಲ್ಕ ಪಾವತಿಸಿ ತಮ್ಮ ನಳದ ಸಂಪರ್ಕವನ್ನು ಸಕ್ರಮಗೊಳಿಸಿಕೊಳ್ಳಬೇಕೆಂದು ಕಲಬುರಗಿ ಕುಸ್ಸೆಂಪ್-ಕೆಯುಐಡಿಎಫ್‍ಸಿ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ದಿನ ದಿನಗಳಲ್ಲಿ ಹಂತ-ಹಂತವಾಗಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಕಲಬುರಗಿ ನಗರದ ಗ್ರಾಹಕರು ಆದಷ್ಟು ಬೇಗ ತಮ್ಮ ಅಕ್ರಮ ನಳ ಸಂಪರ್ಕಗಳನ್ನು ಸಕ್ರಮಗೊಳಿಸಿಕೊಂಡು ಈ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.