ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ
ಚಿಂಚೋಳಿ,ಮೇ.21- ತಹಸೀಲ್ ಕಾರ್ಯಾಲಯದ ಎದರು ಪ್ರತಿಭಟನೆ ಕೈಗೊಂಡ ಹಿಂದುಳಿದ ಜಾತಿ ವರ್ಗಗಳ ಒಕ್ಕೂಟದ ಕಾರ್ಯಕರ್ತರು, ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗ ಅವರನ್ನು ಕೊಲೆ ಮಾಡಿರುವ ಆರೋಪಿಯನ್ನು ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ತಹಶಿಲ್ದಾರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀಮಂತ ಕಟ್ಟಿಮನಿ, ಅವರು, ಕರ್ನಾಟಕ ರಾಜ್ಯದಲ್ಲಿ ರಾಜ್ಯ ಸರ್ಕಾರವು ಮಹಿಳೆಯರಿಗೆ ರಕ್ಷಣೆ ನೀಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಏಕೆಂದರೆ ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗ ಅವರನ್ನು ಮಾಡಿದ ನೋಡಿದರೆ ಹೆಣ್ಣು ಮಕ್ಕಳಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ ಕೂಡಲೇ ರಾಜ್ಯ ಸರ್ಕಾರವು ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಮತ್ತು ಸರ್ಕಾರ ವತಿಯಿಂದ ಅಂಜಲಿ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿವಿಧ ಸಮಾಜದ ಮುಖಂಡರಾದ ಮುಖಂಡರಾದ ಲಕ್ಷ್ಮಣ ಅವುಂಟಿ, ಕೆ ಎಂ ಬಾರಿ, ಶರಣಬಸಪ್ಪ ಮಾಮಶೆಟ್ಟಿ, ಅನೀಲ್ ಜಮಾದಾರ್, ಹಣಮಂತ ಪೂಜಾರಿ, ಭೀಮಶೆಟ್ಟಿ ಮುರುಡ, ದೌಲಪ್ಪ ಸೋಣಗಾರ್, ಕಾಶಿನಾಥ್ ನಾಟೀಕರ, ಖಲೀಲ್ ಪಟೇಲ್, ಶಿವಕುಮಾರ, ಮತ್ತು ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು