ಎಸ್ಸೆಸ್ಸೆಲ್ಸಿ ಫಲಿತಾಂಶ: ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಅಂಕಿತಾಗೆ ಸನ್ಮಾನ
ಸಂಜೆವಾಣಿ ವಾರ್ತೆ,
ವಿಜಯಪುರ,ಮೇ.21 :ಹತ್ತನೇ ತರಗತಿಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ 625ಕ್ಕೆ 625 ಅಂಕ ಪಡೆದ ಕರ್ನಾಟಕ ರಾಜ್ಯದ ಏಕೈಕ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರಳಾದ ಬಾಗಲಕೋಟೆ ಜಿಲ್ಲೆಯ ಹೆಮ್ಮೆಯ ಕುವರಿ ಅಂಕಿತಾ ಅವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಇಂತಹ ಕುವರಿಯನ್ನು ಹೆತ್ತ ತಂದೆ ಹಾಗೂ ತಾಯಿಯನ್ನು ರಾಜ್ಯ ಸರಕಾರಿ ಮಹಿಳಾ ಸಂಘದಿಂದ ಸನ್ಮಾನಿಸಲಾಯಿತು.
ಹೆಮ್ಮೆಯ ಕರ್ನಾಟಕದ ಕುವರಿ ಮುಂದೆಯೂ ಹೆಚ್ಚಿನ ಸಾಧನೆಗೈದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಲೆಂದು ಶುಭ ಕೋರಲಾಯಿತು.
ಸನ್ಮಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ, ಉಪಾಧ್ಯಕ್ಷೆ ಭಾರತಿ ಬಿರಾದಾರ, ಜ್ಯೋತಿ ಯಲಗೊಂಡ, ಸವಿತಾ ಪಾಟೀಲ, ಸಂಘಟನಾ ಕಾರ್ಯದರ್ಶಿ ಲಕ್ಷ್ಮೀ ಹೊಸಮನಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಕಮಲಾ ಮುರಾಳ, ಈರಣ್ಣ ಬಿರಾದಾರ, ಭಜಂತ್ರಿ ಮತ್ತಿತರರು ಹಾಜರಿದ್ದರು.