ನಾಳೆ ಬ್ರಹ್ಮರಥೋತ್ಸವ
ಬೆಂಗಳೂರು, ಮೇ ೨೦- ನಗರದ ಬಳೇಪೇಟೆಯಲ್ಲಿ ನೆಲಸಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ನಾಳೆ ಮಧ್ಯಾಹ್ನ ೧೨.೩೦ಕ್ಕೆ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿಯವರ ಬ್ರಹ್ಮ ರಥೋತ್ಸವವನ್ನು ಏರ್ಪಡಿಸಲಾಗಿದೆ.
ಅತ್ಯಂತ ವಿಜೃಂಭಣೆಯಿಂದ ನಡೆಯುವ ಈ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯಬೇಕೆಂದು ದೇವಸ್ಥಾನದ ಪ್ರಧಾನ ಅರ್ಚಕ ಕೆ.ಆರ್. ಸತೀಶ್‌ರವರು ಪ್ರಕಟಣೆಯಲ್ಲಿ ಕೋರಿದ್ದಾರೆ. ಬ್ರಹ್ಮರಥೋತ್ಸವ ಬಳಿಕ ಅನ್ನದಾನವನ್ನು ಏರ್ಪಡಿಸಲಾಗಿದೆ.