ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀದರ ಪ್ರವಾಸ
ಬೀದರ,ಮೇ.20: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ-2024ರ ಪ್ರಚಾರಕ್ಕಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿನಾಂಕ: 21-05-2024 ರಂದು ಮಧ್ಯಾಹ್ನ 3.00 ಗಂಟೆಗೆ ಸಿದ್ಧಾರೂಡ ಆಯುರ್ವೇದಿಕ ಕಾಲೇಜಿನಲ್ಲಿ ಹಾಗೂ 4.00 ಗಂಟೆಗೆ ಕರ್ನಾಟಕ ಕಾನೂನು ಪದವಿ ಕಾಲೇಜಿನಲ್ಲಿ ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ಅಭ್ಯರ್ಥಿ ಅಮರನಾಥ ಪಾಟೀಲ ಪರ ಪ್ರಚಾರವನ್ನು ಮಾಡಲಿದ್ದಾರೆ ಎಂದು ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಹುಡಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಾಗೂ ಎರಡು ಚುನಾವಣೆಯ ಪ್ರಚಾರ ಸಭೆಯಲ್ಲಿ ಅಧೀಕ ಸಂಖ್ಯೆಯಲ್ಲಿ ಪದವೀಧರ ಮತದಾರರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.