ಬಸ್ ನಿಲ್ದಾಣ ಅಸ್ವಚ್ಛತೆ ಅಧಿಕಾರಿಗಳ ವಿರುದ್ಧ ಆಕ್ರೋಶ : ಅಧಿಕಾರಿಗಳ ಬೆವರಿಳಿಸಿದ ಲೋಕಾಯುಕ್ತ ಇನ್ಸ್ಪೆಕ್ಟರ್ ಪ್ರದೀಪ ಕೊಳ್ಳಾ
ಸಂಜೆವಾಣಿ ವಾರ್ತೆ
ಔರಾದ್ :ಮೇ.20: ಲೋಕಾಯುಕ್ತ ಪೆÇಲೀಸ್ ಇನ್ಸ್ಪೆಕ್ಟರ್ ಪ್ರದೀಪ ಕೊಳ್ಳಾ ಶನಿವಾರ ಮಧ್ಯಾಹ್ನ ಔರಾದ್ ಪಟ್ಟಣದ ಬಸ್ ನಿಲ್ದಾಣಕ್ಕೆ ದಿಢೀರ ಭೇಟಿ ನೀಡಿ ಅ-ಸ್ವಚ್ಛತೆ ಕಂಡು ಅಧಿಕಾರಿಗಳ ಬೆವರಿಳಿಸಿದ ಘಟನೆ ಜರುಗಿತು.
ಪಟ್ಟಣದ ಬಸ್ ನಿಲ್ದಾಣ ಮತ್ತು ಒಳಚರಂಡಿ ಅವ್ಯವಸ್ಥೆಗೆ ಕಿಡಿಕಾರಿದರು. ಈ ವೇಳೆ ಪ್ರಯಾಣಿಕರು, ಇಲ್ಲಿಯ ಶೌಚಾಲಯದಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯಲಾಗುತ್ತಿದೆ. ಅಲ್ಲದೇ ಬಸ್ ನಿಲ್ದಾಣದಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಅಸ್ವಚ್ಛೆಯಿಂದ ಕೂಡಿದೆ ಘಟಕ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಮನವಿ ಮಾಡಿದರು.
ಶೌಚಾಲಯ ಕೋಣೆಗಳ ಬಳಿಗೆ ತೆರಳಿದ ಅಧಿಕಾರಿಗಳು ಸಾರ್ವಜನಿಕರಿಂದ ಮಾಹಿತಿ ಪಡೆದರು. ಈ ವೇಳೆ ಮಹಿಳೆಯೊಬ್ಬರು ಮೂತ್ರ ವಿಸರ್ಜನೆಗೂ ಹಣ ಪಡೆಯಲಾಗುತ್ತಿದೆ ಎಂದು ಗಮನಕ್ಕೆ ತಂದಿದ್ದು, ಸ್ಥಳದಲ್ಲಿರುವ ಸಾರಿಗೆ ಘಟಕದ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡರು.
ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ನಿಲ್ದಾಣದ ಒಳ ಚರಂಡಿಗಳು ಸ್ವಚ್ಛತೆ ಮಾಡಬೇಕು. ನಿಲ್ದಾಣದಲ್ಲಿ ಸ್ವಚ್ಛತೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿಲ್ದಾಣದಲ್ಲಿ ಏನಾಗುತ್ತಿದೆ ಎನ್ನುವುದು ನಿಮ್ಮಗೆ ಗೊತ್ತಿಲ್ಲವೇ ಎಂದು ವಾಗ್ದಾಳಿ ನಡೆಸಿದರು. ನೀವುಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ ಅವರು ಎಲ್ಲವೂ ಸ್ವಚ್ಛವಾಗಬೇಕು ಇಲ್ಲವಾದಲ್ಲಿ ದೂರು ದಾಖಲಿಸಿಕೊಂಡು ಕ್ರಮಕೈಗೊಳ್ಳುವದಾಗಿ ಎಚ್ಚರಿಕೆ ನೀಡಿದರು.
ಈ ವೇಳೆ ಸ್ಥಳದಲ್ಲಿರುವ ಅಧಿಕಾರಿಗಳು ಎಲ್ಲವೂ ಬಗೆಹರಿಸುವದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ ನಾಗಯ್ಯ ಸ್ವಾಮಿ, ತಾಪಂ ಇಒ ವೆಂಕಟ ಶಿಂಧೆ ಸೇರಿದಂತೆ ಅನೇಕರಿದ್ದರು.