ಲಿಂ. ಶ್ರೀ ಜಯವಿಭವ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಸ್ಮರಣೋತ್ಸವ

ಸಂಜೆವಾಣಿ ವಾರ್ತೆ
ಚಿತ್ರದುರ್ಗ ಮೇ-19 : ಚೀನಾದವರು ನಮ್ಮ ದೇಶದ ಮೇಲೆ ಆಕ್ರಮಣ ಮಾಡಿದ ಸಂದರ್ಭದಲ್ಲಿ ದೇಶರಕ್ಷಣೆಯ ಕಾರ್ಯಕ್ಕೆ ಬಂಗಾರದ ಕಿರೀಟ, ದಪ್ಪನೆಯ ಉಂಗುರಗಳು, ಸಹಸ್ರಾರು ರೂ.ಗಳ ಕಾಣಿಕೆಯನ್ನು ಅರ್ಪಿಸುವ ಮೂಲಕ ದೇಶಾಭಿಮಾನ ಮೆರೆದು ಲಿಂಗೈಕ್ಯ ಶ್ರೀ ಜಯವಿಭವ ಸ್ವಾಮಿಗಳು ಮಾದರಿಯಾಗಿದ್ದಾರೆ ಎಂದು ಹಿರಿಯ ವಿದ್ವಾಂಸರಾದ ಡಾ. ಬಿ. ರಾಜಶೇಖರಪ್ಪ ನೆನಪಿಸಿಕೊಂಡರು.ಅವರು ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ ಲಿಂ. ಶ್ರೀ ಜಯವಿಭವ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಸ್ಮರಣೋತ್ಸವದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡುತ್ತ, ಜಯದೇವ ಸ್ವಾಮಿಗಳವರ ಉತ್ತರಾಧಿಕಾರಿಗಳಾಗಿ ಬಂದವರು ಶ್ರೀ ಜಯವಿಭವ ಸ್ವಾಮಿಗಳು. ಇವರ ಮೂಲ ಹೆಸರು ಶಿವಲಿಂಗ ಮಹಾದೇವರು. ಇವರು ಕಾಶಿಗೆ ಉನ್ನತ ಅಭ್ಯಾಸಕ್ಕೆ ತೆರಳಿ ವೇದೋಪನಿಷತ್ತು, ಆಗಮಗಳನ್ನು ಕಲಿತರು. ಚಿತ್ರದುರ್ಗಕ್ಕೆ ಬಂದ ನಂತರ ಜಯದೇವ ಸ್ವಾಮಿಗಳು ಅವರನ್ನು ಜಯವಿಭವ ಸ್ವಾಮಿಗಳು ಎಂದು ನಾಮಕರಣ ಮಾಡುತ್ತಾರೆ. ಹಿರಿಯ ಜಗದ್ಗುರುಗಳಿಗೆ ಇವರ ಮೇಲೆ ವಿಶೇಷ ಆಸಕ್ತಿ ಇತ್ತು. 1949ರಲ್ಲಿ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿ, 1956ರಲ್ಲಿ ಜಯದೇವ ಜಗದ್ಗುರುಗಳು ಲಿಂಗೈಕ್ಯರಾದ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದರು.