ತಾಲೂಕು ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಆಯ್ಕೆ
ಮಾಲೂರು.ಆ.೫-ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು ಸದಸ್ಯರು ಪ್ರೌಢಶಾಲಾ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದು ಶಿಕ್ಷಕರಿಗೆ ಯಾವುದೇ ರೀತಿಯ ಸಮಸ್ಯೆಗಳು ಬಾರದಂತೆ ಎಚ್ಚರಿಕೆಯಿಂದ ಕೆಲಸ ಮಾಡುವ ಮೂಲಕ ಸಂಘವನ್ನು ಕಟ್ಟುವ ಕೆಲಸ ಮಾಡಲಾಗುವುದು ಎಂದು ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ತಾಲೂಕು ಸಂಘದ ನೂತನ ಅಧ್ಯಕ್ಷ ಎಂ ಶ್ರೀನಿವಾಸ್ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು
ಪ್ರೌಢಶಾಲಾ ಸಹ ಶಿಕ್ಷಕರು ತಾಲೂಕಿನಲ್ಲಿ ಉತ್ತಮ ರೀತಿಯ ಕಾರ್ಯನಿರ್ವಹಿಸುತ್ತಿರುವುದರಿಂದ ೧೦ನೇ ತರಗತಿಯಲ್ಲಿ ಉತ್ತಮ ಫಲಿತಾಂಶ ಸಿಗುತ್ತಿದೆ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಕಳೆದ ಹತ್ತು ವರ್ಷಗಳ ಹಿಂದೆ ರಾಜ್ಯ ಸರ್ಕಾರದ ಮಾನ್ಯತೆ ದೊರೆತಿದೆ ಸಂಘವು ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಗೆ ಮತ್ತೆ ಕೊಂಡಿಯಾಗಿ ಸಹ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ
ಪ್ರೌಢಶಾಲಾ ಶಿಕ್ಷಕರು ಒತ್ತಡದ ನಡುವೆ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ ಹತ್ತನೇ ತರಗತಿ ಫಲಿತಾಂಶಕ್ಕಾಗಿ ರಜಾ ದಿನಗಳಲ್ಲಿಯೂ ವಿಶೇಷ ತರಗತಿಗಳು ತೆಗೆದುಕೊಂಡು ಕೆಲಸ ಮಾಡಲು ಸರ್ಕಾರ ಆದೇಶದ್ದು ಇದರಿಂದ ಶಿಕ್ಷಕರಿಗೆ ರಜೆ ಇಲ್ಲದಂತಾಗಿದೆ ಇಲಾಖೆಯ ಕೆಲಸ ಪರಿಣಾಮಕಾರಿಯಾಗಿ ಮಾಡಿಕೊಂಡು ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳ ಮಾಡಲು ಶಿಕ್ಷಕರಿಗೆ ತಾಳ್ಮೆ ಹಾಗೂ ರಜೆ ದಿನಗಳು ತುಂಬಾ ಅವಶ್ಯಕತೆ ಇರುತ್ತದೆ ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಶಿಕ್ಷಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು ಮಾಲೂರು ತಾಲೂಕಿನಲ್ಲಿ ಸಹ ಈ ಇಂದಿನ ಅಧ್ಯಕ್ಷ ಜಯಂತಿಯವರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಸಂಘವನ್ನು ಕಟ್ಟುವ ಕೆಲಸ ಮಾಡಿದ್ದಾರೆ ಅವರಂತೆ ಎಲ್ಲಾ ಪದಾಧಿಕಾರಿಗಳ ಸಹಕಾರವನ್ನು ಪಡೆದು ಪ್ರತಿ ತಿಂಗಳು ಸಭೆ ನಡೆಸಿ ಶಿಕ್ಷಕರಿಗೆ ಯಾವುದೇ ರೀತಿಯ ಸಮಸ್ಯೆಗಳು ಬಾರದಂತೆ ಕಾರ್ಯನಿರ್ವಹಿಸಲಾಗುವುದು ಎಂದರು
ಗ್ಯಾರೆಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಆಂಜಿನಪ್ಪ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಎಂ ಆರ್ ಜಯಂತಿ ಪ್ರಧಾನ ಕಾರ್ಯದರ್ಶಿ ಎಂರಾಮಯ್ಯ ಖಜಾಂಚಿ ಮಮತಾ ಎನ್ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಆರ್. ನರಸಿಂಹ ರಾಜ್ಯ ಉಪಾಧ್ಯಕ್ಷ ಅಶ್ವತ್ ಖಜಾಂಚಿ ಅರ್ಜುನ್ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎಂಜಿ ನಾಗರಾಜ್ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆನಂದ್ ಮೂರ್ತಿ ಉಪ ಪ್ರಾಂಶುಪಾಲ ರಾಮಕೃಷ್ಣಪ್ಪ ನಿರ್ದೇಶಕರಾದ ವಿಶ್ವನಾಥ್ ಸಿಂಗ್ ಶಿವಕುಮಾರ್ ಇನ್ನಿತರರು ಹಾಜರಿದ್ದರು.