ಕರ್ನಾಟಕದ ಸಮಗ್ರ ಏಳ್ಗೆಯೇ ಕಸಾಪ ಗುರಿ: ಮೂಲಗೆ
ಔರಾದ್: ಮೇ.19:ಕನ್ನಡ, ಕನ್ನಡಿಗ, ಕರ್ನಾಟಕ ವಿಷಯಕ್ಕೆ ಸಂಬಂಧಿಸಿದಂತೆ ಪೂರಕ ಕಾರ್ಯಕ್ರಮಗಳನ್ನು ಹಾಗೂ ಹೋರಾಟಗಳನ್ನು ರೂಪಿಸಿಕೊಂಡು ಬಂದು ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆಯನ್ನು ಸದಾ ಜೀವಂತವಾಗಿರುವ ಕಾರ್ಯವನ್ನು ಪರಿಷತ್ತು ಶತಮಾನದಿಂದ ಮಾಡುತ್ತಾ ಬಂದಿದೆ. ಪುಸ್ತಕ ಪ್ರಕಟನೆ, ಸಮ್ಮೇಳನ, ಕಾರ್ಯಾಗಾರ, ವಿಚಾರ ಸಂಕಿರಣ ಮುಂತಾದ ಕಾರ್ಯಚಟುವಟಿಕೆಗಳು ಪರಿಷತ್ತಿನ ಜೀವಾಳವಾಗಿದೆ. ಕನ್ನಡ, ಕನ್ನಡಿಗ, ಕರ್ನಾಟಕದ ಸಮಗ್ರ ಏಳ್ಗೆಯೇ ಪರಿಷತ್ತಿನ ಗುರಿಯಾಗಿದೆ ಎಂದು ಶಿಕ್ಷಕ ಜಗನ್ನಾಥ ಮೂಲಗೆ ಹೇಳಿದರು.
ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಂತಪೂರಿನ ಸಿದ್ದರಾಮೇಶ್ವರ ಕಾಲೇಜಿನಲ್ಲಿ ಜರುಗಿದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿ ಶಾಲಿವಾನ ಉದ್ಗೀರೆ ನೇತೃತ್ವದಲ್ಲಿ ಪರಿಷತ್ತಿನ ಚಟುವಟಿಕೆಗಳು ಕ್ರಿಯಾಶೀಲವಾಗಿ ಜರುಗುತ್ತಿವೆ ಎಂದು ತಿಳಿಸಿದರು.
ಪ್ರಾಂಶುಪಾಲ ಓಂ ಪ್ರಕಾಶ ದಡ್ಡೆ ಉದ್ಘಾಟನೆ ನುಡಿ ಮಾತನಾಡಿ ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಬೀದರ್ ಭಾಗದಲ್ಲಿ ಕನ್ನಡ ಉಳಿಸಿ ಬೆಳಸಿರುವ ಶ್ರೇಯಸ್ಸು ಭಾಲ್ಕಿಯ ಚನ್ನಬಸವ ಪಟ್ಟದ್ದೇವರಿಗೆ ಸಲ್ಲುತ್ತದೆ. ಸಾಹಿತ್ಯ ಪರಿಷತ್ತು ಸಮ್ಮೇಳನ, ಪುಸ್ತಕ ಪ್ರಕಟನೆ, ಕಾರ್ಯಾಗಾರಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಮಾಡಿದೆ. ಕನ್ನಡ ನಾಡು ನುಡಿ, ನೆಲ ಜಲದ ಪ್ರಶ್ನೆ ಬಂದಾಗ ಪರಿಷತ್ತು ಮುಂಚೂಣಿಯಲ್ಲಿ ನಿಂತು ಕನ್ನಡಿಗರಿಗೆ ನ್ಯಾಯ ಒದಗಿಸುವ ಕಾರ್ಯ ಮಾಡುತ್ತಿದೆ.
ಸಾಹಿತ್ಯ ಪರಿಷತ್ ಸಂಚಾಲಕ ಅಶೋಕ ಶೆಂಬೆಳ್ಳೆ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ನಮ್ಮೆಲ್ಲರಿಗೆ ಏಕತೆ ಹಾಗೂ ಅಸ್ಮಿತೆಯ ಸಂಕೇತ. ಸಾಹಿತ್ಯ ಪರಿಷತ್ತು ಸ್ಥಾಪನೆಯಾದಗಿನಿಂದ ಇಲ್ಲಿಯವರೆಗೆ ಅನೇಕ ಮಹನೀಯರು, ಹೋರಾಟಗಾರರು ಪರಿಷತ್ತಿನ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ಪರಿಷತ್ತು ಉದಯಕ್ಕೆ ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಬೇಕು’ ಎಂದರು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಅಧ್ಯಕ್ಷ ಶಾಲಿವಾನ ಉದ್ಗೀರೆ, ಶಿಕ್ಷಕ ಗುರುನಾಥ ದೇಶಮುಖ, ವಿಜಯಕುಮಾರ ಶಿಂಧೆ, ಪ್ರಾಚಾರ್ಯ ನವೀಲಕುಮಾರ ಉತ್ಕಾರ, ಸುಪುತ್ರ ಧರಣಿ ಸೇರಿದಂತೆ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಲಪ್ಪ ಬುಟ್ಟೆ ನಿರೂಪಿಸಿದರು ನವೀಲಕುಮಾರ ಉತ್ಕಾರ ಸ್ವಾಗತಿಸಿದರು.
ಕನ್ನಡಿಗರ ಮಾತೃ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡಿನ ಎಲ್ಲ ಸಾಹಿತಿಗಳ, ಸಾಹಿತ್ಯಾ ಅಭಿಮಾನಿಗಳ , ಸಮಸ್ತ ಕನ್ನಡ ಮನಸ್ಸುಗಳ ಏಕೈಕ ಸಾರ್ವಭೌಮ ಸಂಸ್ಥೆಯಾಗಿದೆ. ಕನ್ನಡ ನಾಡು ನುಡಿ ಸಂಸ್ಕøತಿ, ಸಾಹಿತ್ಯ ಮತ್ತು ಗಡಿನಾಡ ಕನ್ನಡಿಗರ ಬಗ್ಗೆಯೂ ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿ???ಂಡು ಕನ್ನಡ ಸಾಹಿತ್ಯ ಪರಿಷತ್ತು ಜನಪರವಾಗಿ ಬೆಳೆದಿದೆ.
-ಪರಮೇಶ.ಡಿ.ವಿಳಸಪೂರೆ
ಪತ್ರಕರ್ತ