ಕನ್ನಡ ಸಾಹಿತ್ಯ ಪರಿಷತ್ತು ಅಸ್ಮಿತೆಯ ಸಂಕೇತ
ಸಂಜೆವಾಣಿ ನ್ಯೂಸ್
ಕೆ.ಆರ್.ನಗರ.ಮೇ.19:- ಕನ್ನಡ ಸಾಹಿತ್ಯ ಪರಿಷತ್ತು ನಮ್ಮೆಲ್ಲರಿಗೆ ಏಕತೆ ಹಾಗೂ ಅಸ್ಮಿತೆಯ ಸಂಕೇತವಾಗಿದ್ದು ಅದು ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಅನೇಕ ಮಹನೀಯರು, ಹೋರಾಟಗಾರರು ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ ಪರಿಷತ್ತಿನ ಉದಯಕ್ಕೆ ಕಾರಣರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ನಾವು ಸದಾ ಸ್ಮರಿಸಬೇಕು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿಂಡಿಮ ಶಂಕರ್ ಹೇಳಿದರು.
ಪಟ್ಟಣದ ರೋಟರಿ ಭವನದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ 110 ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕನ್ನಡ ಬಾಷೆಯ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕಿದ್ದು ಪತ್ರಿಕೆಗಳನ್ನು ಕೊಂಡು ಓದಿ ಪುಸ್ತಕಗಳನ್ನು ಖರೀದಿಸುವ ಕಡೆಗೆ ಗಮನ ಹರಿಸಿ ಆ ಮೂಲಕ ಕನ್ನಡ ಮತ್ತು ಕನ್ನಡ ಬರಹಗಾರರನ್ನು ಪೆÇ್ರೀತ್ಸಾಹಿಸಬೇಕಿದೆ ಎಂದರು.
ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಭಾಷಿಕರು ಬೇರೆ ಭಾಷೆಯ ಆಡಳಿತದ ಅಧೀನದಲ್ಲಿದ್ದರೂ ಈ ಸಂಕಟದಿಂದ ಹೊರ ಬರಲು ಕನ್ನಡ ಭಾಷೆ, ಪ್ರದೇಶ, ಸಂಸ್ಕೃತಿಯನ್ನು ಒಗ್ಗೂಡಿಸುವ, ಅದರ ಅಸ್ಮಿತೆಯನ್ನು ರಕ್ಷಿಸಿಕೊಳ್ಳುವ ಪರಿಸ್ಥಿತಿ ಎದುರಾಗಿತ್ತು ಆ ವೇಳೆ ಕನ್ನಡ ಕಟ್ಟುವ ಕಾರ್ಯಕ್ಕೆ ನೆರವಾಗಿದ್ದು ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಮಾಹಿತಿ ನೀಡಿದರು.
ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಗೆ ಮತದಾನದ ಹಕ್ಕನ್ನು ಕೊಟ್ಟವರು, ಮಹಿಳೆಯರ ಸಬಲೀಕರಣಕ್ಕೆ ಹೊಸ ಕಾಯ್ದೆ ತಂದವರು ಒಡೆಯರ್ ಹಾಗಾಗಿ ಅವರ ಜೀವನ ಚರಿತ್ರೆಯನ್ನು ಮುಂದಿನ ಯುವ ಪೀಳಿಗೆಗೆ ತಿಳಿಸಲು ಪಟ್ಟಣದ ಪ್ರತಿ ಮನೆಯಲ್ಲೂ ಜೀವನ ಚರಿತ್ರೆ ಮತ್ತು ಬಾವಚಿತ್ರ ಆಳವಡಿಸಿಕೊಂಡು ನಮ್ಮ ಮಹಾರಾಜರ ಹೆಸರನ್ನು ಏರಿಸೋಣವೆಂದರು.
ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ್ದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು ಮಾತನಾಡಿದರು. ರೋಟರಿ ಅಧ್ಯಕ್ಷ ನಾಗರಬಾವಿಕಟ್ಟೆ, ತಾ.ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಎಂ.ಡಿ.ದಾಕ್ಷಾಯಿಣಿ, ನಗರ ಘಟಕದ ಅಧ್ಯಕ್ಷ ಸಿ.ವಿ.ಮೋಹನ್ ಕುಮಾರ್, ತಾ.ಕಸಾಪ ಉಪಾಧ್ಯಕ್ಷ ರಾಮಕೃಷ್ಣ, ಸಾಹಿತಿ ಹೆಗ್ಗಂದೂರು ಪ್ರಭಾಕರ್, ಜಿಲ್ಲಾ ಕಸಾಪ ಕೋಶಾಧ್ಯಕ್ಷ ಜಿ.ಪ್ರಕಾಶ್, ಗೌರವ ಕಾರ್ಯದರ್ಶಿ ಉದಯ್ ಕುಮಾರ್, ತಾ.ಕಸಾಪ ಪದಾಧಿಕಾರಿಗಳಾದ ಭಾಸ್ಕರ್, ಬೊಮ್ಮನಹಳ್ಳಿ ಮಹದೇವ್, ಗೋಪಾಲ್ ರಾಜ್, ರಾಮಶೆಟ್ಟಿ, ಕೃಷ್ಣ, ಕೆ.ಪಿ.ಭಾರತಿ, ಮೋಹನಕುಮಾರಿ, ರೂಪಶತೀಶ್, ವಂದನಾ, ಮೇರಿ ಮೊದಲಾದವರು ಇದ್ದರು.