ಹುಬ್ಬಳ್ಳಿ ಯುವತಿಯರ ಹತ್ಯೆಗೆ ರಾಜ್ಯ ಸರ್ಕಾರ ಕಾನೂನು ವೈಫಲ್ಯವೇ ಕಾರಣ: ಬಿಜೆಪಿ ಮಹಿಳಾ ಮೋರ್ಚಾ ದೂರು
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ.19- ಹುಬ್ಬಳ್ಳಿಯಲ್ಲಿ ನಡೆದಿರುವ ಯುವತಿ ಅಂಜಲಿ ಹತ್ಯೆ ಹಾಗೂ ನೇಹಾ ಹತ್ಯೆ ಪ್ರಕರಣಗಳು ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆ ವೈಫಲ್ಯವೇ ಪ್ರಮುಖ ಕಾರಣವಾಗಿದ್ದು, ಈ ಸರ್ಕಾರದಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದಿಂದ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ದೂರು ಸಲ್ಲಿಸಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ಮಹಿಳಾ ಮೋರ್ಚಾ ಅಧ್ಯಕ್ಷೆ ಮಲೆಯೂರು ಕಮಲಮ್ಮ ನೇತೃತ್ವದಲ್ಲಿ ಪದಾಧಿಕಾರಿಗಳು ಅಗಮಿಸಿ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ಮಲೆಯೂರು ಕಮಲಮ್ಮ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ ನೇಹಾ ಹಾಗು ಅಂಜಲಿ ಹತ್ಯೆಯು ರಾಜ್ಯ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಅಂಜಲಿ ಮನೆಯವರು ರೋಪಿಯ ವಿರುದ್ದ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಸಹ ಅಲ್ಲಿನ ಪೊಲೀಸರು ನಿರ್ಲಕ್ಷ್ಯ ವಹಿಸಿರುವುದು ಅಂಜಲಿ ಹತ್ಯೆಗೆ ಪ್ರಮುಖ ಕಾರಣವಾಗಿದೆ ಎಂದರು.
ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮರ್ ನೆನಪು ಮಾಸುವ ಮುನ್ನವೇ ಮತ್ತೊಬ್ಬ ಯುವತಿ ಅಂಜಲಿ ಕೊಲೆಯಾಗಿದೆ. ಆರೋಪಿಯನ್ನು ಬಂಧಿಸಿರುವುದು ಸರಿಯμÉ್ಟೀ, ಆದರೆ ನೇಹಾ ಹಿರೇಮಠ್ ಕೊಲೆಯಾದ ನಂತರ ಪೆÇೀಲೀಸರು ಎಚ್ಚೆತ್ತುಕೊಳ್ಳಬೇಕಿತ್ತು. ಪೆÇೀಲೀಸರು ಮತ್ತು ರಾಜ್ಯ ಸರ್ಕಾರದ ನಡುವೆ ಸಮನ್ವಯತೆಯ ಕೊರತೆ ಪೆÇೀಲೀಸ್ ಇಲಾಖೆಯಲ್ಲಿನ ಲೋಪದೋಷದ ಕಾರಣದಿಂದ ಅಂಜಲಿ ಕೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅದೋಗತಿಗೆ ತಲುಪಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್ ಅವರುಗಳು ನೇರ ಹೊಣೆಗಾರರಾಗಿದ್ದಾರೆ ಎಂದು ಆರೋಪಿಸಿದರು.
ಅಂಜಲಿ ಕೊಲೆಯು ಅಮಾನುಷವಾದ ಹಾಗೂ ಅತ್ಯಂತ ಧಾರುಣವಾದ ಹತ್ಯೆಯಾಗಿದ್ದು, ಆರೋಪಿಯು ಮನೆಗೆ ನುಗ್ಗಿ ಕೊಲೆ ಮಾಡಿ ಹೋಗುತ್ತೇನೆ ಎಂದರೆ ಈ ನೆಲದ ಕಾನೂನಿಗೆ ಬೆಲೆ ಇಲ್ಲದಂತಾಗಿದೆ. ಈ ನೆಲದ ಕಾನೂನಿನ ಮೇಲೆ ಗೌರವ ಬರಬೇಕಾದರೆ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ರಾಜ್ಯದ ಜನರ ಸುರಕ್ಷತೆಗೆ ಕ್ರಮ ವಹಿಸಬೇಕು ಒಂದು ವಾರದ ಹಿಂದೆಯೇ ಆರೋಪಿ ಗಿರೀಶ್ ಅಂಜಲಿ ಕೊಲೆ ಬೆದರಿಕೆ ಹಾಕಿದ್ದ ಎಂದು ಕುಟುಂಬಸ್ಥರು ಠಾಣೆಗೆ ತಿಳಿಸಿದ್ದರು. ಆಗಲೇ ಕ್ರಮ ಕೈಗೊಂಡಿದ್ದರೆ ಈ ಹತ್ಯೆಯಾಗುತ್ತಿರಲಿಲ್ಲ.
ಈಗ ನಡೆದಿರುವ ಹತ್ಯೆಗಳಿಗೆ ನ್ಯಾಯ ದೊರಕಿಸುವುದು ಹಾಗೂ ಮುಂದೆ ಇಂತಹ ಹೇಯ ಕೃತ್ಯಗಳು ನಡೆಯದಂತೆ ತಡೆಯುವುದು ರಾಜ್ಯ ಸರ್ಕಾರದ ಅದ್ಯ ಕರ್ತವ್ಯವಾಗಿದೆ. ಈ ಪರಿಸ್ಥಿತಿ ಮುಂದುವರೆದರೆ ಬಿಜೆಪಿ ಮಹಿಳಾ ಮೋರ್ಚಾದಿಂದ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಕಮಲಮ್ಮ ಮನವಿ ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೈಲಾ, ಉಪಾಧ್ಯಕ್ಷರಾದ ಮಮತಾ ಬಾಲಸುಬ್ರಮಣ್ಯ, ಜಯಶೀಲಾ ರಾಜಶೇಖರ್, ಕಾರ್ಯಕಾರಣಿ ಸದಸ್ಯ ದಾಕ್ಷಾಯಣಿ ಇತರರು ಇದ್ದರು.