ಸಾರ್ವಜನಿಕರ ಕುಂದುಕೊರತೆ ಆಲಿಸಲು ವಿವಿಧ ಬಡಾವಣೆಗಳಲ್ಲಿ ಬೀಟ್ ಸಭೆ
ಕಲಬುರಗಿ,ಮೇ.18-ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವಿವಿಧ ಬಡಾವಣೆಗಳಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಹಾಗೂ ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಗರದ ಒಟ್ಟು 10 ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಗಳ ವಿವಿಧ ಬಡಾವಣೆಗಳಲ್ಲಿ 63 ಬೀಟ್ ಸಭೆಗಳನ್ನು ನಡೆಸಲಾಯಿತು.
1181 ಸಾರ್ವಜನಿಕರು ಈ ಬೀಟ್ ಸಭೆಗಳಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದಲ್ಲದೇ ಅವುಗಳಿಗೆ ಪರಿಹಾರ ಕೈಗೊಳ್ಳುವ ಭರವಸೆ ನೀಡಲಾಯಿತು. ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ 112 ಸಹಾಯವಾಣಿಯ ಸದ್ಭಳಕೆಯ ಬಗ್ಗೆ ಅರಿವು ಮೂಡಿಸಲಾಯಿತು. ಲೈಂಗಿಕ ಅಪರಾಧ, ಸೈಬರ್ ಅಪರಾಧಗಳ ಬಗ್ಗೆ ಹಾಗೂ ವಿವಿಧ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಯಿತು. ಸಾರ್ವಜನಿಕರಿಗೆ ತಮ್ಮ ಸುತ್ತಮುತ್ತಲು ನಡೆಯುವ ವಿವಿಧ ಅಪರಾಧಗಳ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ತ್ವರಿತಗತಿಯಲ್ಲಿ ಮಾಹಿತಿ ನೀಡುವಂತೆ ಕೋರಲಾಯಿತು.