ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ಶುಲ್ಕ ವಿನಾಯಿತಿಗೆ ಮನವಿ
ವಿಜಯಪುರ,ಮೇ.18 :ಜಿಲ್ಲೆಯಲ್ಲಿ ಇರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಪ್ರವೇಶ ಶುಲ್ಕ ಪಡೆಯದೆ (ಈಡಿeeshiಠಿ ಅಚಿಡಿಜ Sಛಿheme) ಮುಖಾಂತರ ಪಡೆಯುವ ಕುರಿತು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ (ಬಣ) ವತಿಯಿಂದ ಮನವಿ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ರಕ್ಷಣಾ ವೇಧಿಕೆ ಸ್ವಾಭಿಮಾನಿ ಬಣ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷ ಜಗದೇವ ಸೂರ್ಯವಂಶಿ ಮಾತನಾಡಿ, ಕರ್ನಾಟಕ ರಾಜ್ಯ ಸರಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಪ್ರವೇಶ ಪಡೆದ ನಂತರ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡುತ್ತದೆ. ಈ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಆರ್ಥಿಕವಾಗಿ ದುರ್ಬಲವಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ, ಭರಿಸಲು ಆಗದಿರುವ ಕಾರಣ ಸರಕಾರವು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರವೇಶ ನಡೆಯುವ ಸಂದರ್ಭದಲ್ಲಿ ಪ್ರವೇಶ ಶುಲ್ಕ ಪಡೆಯದೆ (ಈಡಿeeshiಠಿ ಅಚಿಡಿಜ Sಛಿheme) ಮುಖಾಂತರ ಪ್ರವೇಶ ಪಡೆಯುವ ಸೌಲಭ್ಯವನ್ನೂ ಉಲ್ಲೇಖಿತ ಸರಕಾರಿ ಆದೇಶದಲ್ಲಿ ತಿಳಿಸಿದೆ. ಆದರೆ ಜಿಲ್ಲೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಉಲ್ಲೇಖಿತ ಸರಕಾರಿ ಆದೇಶವನ್ನು, ಸರಕಾರವೂ ಹಿಂದಿನ ಶೈಕ್ಷಣಿಕ ವರ್ಷದಿಂದಲೇ ಕಾರ್ಯಗತಗೊಳಿಸಲು ಸೂಚಿಸಿರುತ್ತದೆ. ನಮ್ಮ ಜಿಲ್ಲೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಈ ಆದೇಶವನ್ನು ಕಾರ್ಯಗತಗೊಳಿಸಲು ವಿಫಲವಾಗಿರುತ್ತವೆ ಎಂದರು.
ಈಗಾಗಲೇ ವಿದ್ಯಾರ್ಥಿಗಳು ಈಡಿeeshiಠಿ ಅಚಿಡಿಜ Sಛಿheme ಮುಖಾಂತರ ಪ್ರವೇಶ ಪಡೆಯಲು ಅರ್ಜಿಯನ್ನು ಸಲ್ಲಿಸಿದಲ್ಲಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿಯನ್ನೂ ಕೊಟ್ಟು ಅವರಿಂದ ಪ್ರವೇಶ ಶುಲ್ಕ, ಮತ್ತು ಪರೀಕ್ಷಾ ಶುಲ್ಕವನ್ನೂ ಪಡೆಯುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವಂಗಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮತ್ತು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ, ತಾವು ಜಿಲ್ಲೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರ ಮತ್ತು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪದವಿ ಪೂರ್ವ ಇಲಾಖೆ, ವಿಜಯಪುರ ಇವರ ಸಮ್ಮುಖದಲ್ಲಿ ಸಭೆಯನ್ನು ಕರೆದು ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಸೂಚನೆಯನ್ನು ನೀಡಬೇಕೆಂದು ಆಗ್ರಹಿಸಿದರು.
ಪ್ರೀಶಿಪ್ ಕಾರ್ಡ್ ಸ್ಕೀಮ್ ಸೌಲಭ್ಯವು ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತಲುಪದಿದ್ದಲ್ಲಿ ಉಗ್ರ ಹೋರಾಟ ಮತ್ತು ಪ್ರತಿಭಟನೆ ಮಾಡುವುದಾಗಿಯೂ ತಿಳಿಸಿದರು.
ಈ ಸಂದರ್ಭದಲ್ಲಿ ಲಕ್ಷ್ಮಣ ಕಂಬಾಗಿ, ಗಿರೀಶ ಕಲಘಟಗಿ, ಡಾ. ಎಂ.ಆರ್. ಗುರಿಕಾರ, ಲಿಂಗರಾಜ ಬಿದರಕುಂದಿ, ಸಂಕೇತ ಪಟ್ಟಣದ ತಿಮ್ಮನಗೌಡ ಪಾಟೀಲ, ಪ್ರಭು ಮಂಕಣಿ ಉಪಸ್ಥಿತರಿದ್ದರು.