ಕಲೆ ಸಂಸ್ಕೃತಿ ಬೆಳಸಲು ಕರೆ
ಕೆಆರ್ ಪುರ,ಸೆ.೨೩- ನಾಡಿನ ಕಲೆ ಸಾಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೇಲ್ಲರ ಜವಾಬ್ದಾರಿಯಾಗಿದೆ ಎಂದು ಶಾಂತಕೃಷ್ಣಮೂರ್ತಿ ಫೌಂಡೇಶನ್ ಸಂಸ್ಥಾಪಕ ಕೃಷ್ಣಮೂರ್ತಿ ಅವರು ತಿಳಿಸಿದರು.
ಕರಾವಳಿ ಸಾಂಸ್ಕೃತಿಕ ವೇದಿಕೆ ವತಿಯಿಂದ ರಾಮಮೂರ್ತಿನಗರದಲ್ಲಿ ಏರ್ಪಡಿಸಿದ್ದ ಯಕ್ಷಗಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕಲೆಯಾದ ಯಕ್ಷಗಾನ ವನ್ನು ಉಳಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ದೇಶದ್ಯಾಂತ ಪರಿಚಯಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಕರಾವಳಿ ಸಾಂಸ್ಕೃತಿಕ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಈ ವರ್ಷ ವು ಯಕ್ಷಗಾನ ಏರ್ಪಡಿಸಿದ್ದು,ಈ ಪರಂಪರೆ ಮುಂದುವರೆಯಲಿ ಎಂದು ನುಡಿದರು.
ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯವರು ನಡೆಸಿಕೊಡುವ ಈ ಯಕ್ಷಗಾನ ದಲ್ಲಿ ಶಿವಶಕ್ತಿ ಗುಳಿಗ ಎಂಬ ಕಥಾ ಭಾಗವನ್ನು ಪ್ರದರ್ಶಿಸಲಾಯಿತು.
ಈ ಸಂಧರ್ಭದಲ್ಲಿ ಆಯೋಜಕರಾದ ಅಶೋಕ್ ಶೆಟ್ಟಿ, ಸುರೇಶ್ ಶೆಟ್ಟಿ, ರಮೇಶ್ ಶೆಟ್ಟಿ ನಂದೀಶ್, ದಿಲೀಪ್ ಸೇರಿದಂತೆ ಉಪಸ್ಥಿತರಿದ್ದರು.