ನರೇಗಾ ಕೆಲಸ ಮಾಡಿ ಆರ್ಥಿಕವಾಗಿ ಸದ್ರಢರಾಗಿ
ಔರಾದ : ಮೇ.17: ತಾಲೂಕಿನ, ಖಾನಾಪೂರ,ಗುಡಪಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತೀರುವ ಕಾಮಗಾರಿಗಳ ಸ್ಥಳಕ್ಕೆ ಬೀದರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು ಭೇಟಿ ನೀಡಿ ನಡೆಯುತ್ತೀರುವ ಕಾಮಗಾರಿಗಳನ್ನು ಪರಿಶೀಲಿಸಿದರು.
ನರೇಗಾ ಕಾಮಗಾರಿ ಸ್ಥಳಕ್ಕೆ ತೆರಳಿ ಅಲ್ಲಿರುವ ಕೂಲಿಕಾರರ ಕುಂದು ಕೊರತೆಗಳನ್ನು ಆಲಿಸಿ, ಕೂಲಿಕಾರರಿಗೆ ನರೇಗಾ ಯೋಜನೆಯಡಿಯಲ್ಲಿ ನಿರಂತರವಾಗಿ ಕೆಲಸ ಮಾಡಿ ಇದರ ಸದುಪಯೋಗವನ್ನು ಪಡೆದುಕೊಂಡು ಆರ್ಥಿಕವಾಗಿ ಸದ್ರಢರಾಗಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಸುದೇಶಕುಮಾರ, ದೀಪಕ್ ಜಿಲ್ಲಾ ಎಡಿಪಿಸಿ, ಗುಡಪಳ್ಳಿ ಪಿಡಿಒ ಸಂತೋಷ ಪಾಟೀಲ, ತಾಲೂಕು ತಾಂತ್ರಿಕ ಸಂಯೋಜಕ ಆನಂದ, ಐಇಸಿ ಸಂಯೋಜಕ ಓಸಿನ್, ತಾಂತ್ರಿಕ ಸಹಾಯಕರು ಮತ್ತು ಕೂಲಿಕಾರ್ಮಿಕರು ಉಪಸ್ಥಿತರಿದ್ದರು.