ರಶ್ಮಿಕಾ ವಿರುದ್ಧ ನಟ ಚೇತನ್ ಕಿಡಿ
ಬೆಂಗಳೂರು.ಮೇ.೧೭- ಪ್ರಧಾನಿ ಮೋದಿಯನ್ನ ಹಾಡಿ ಹೊಗಳಿದ ನಟಿ ರಶ್ಮಿಕಾ ಮಂದಣ್ಣಗೆ ನಟ ಚೇತನ್ ಅಹಿಂಸಾ ಕಿಡಿಕಾರಿದ್ದಾರೆ.
ದೇಶದ ಮೂಲ ಸೌಕರ್ಯ ಅಭಿವೃದ್ಧಿಯಾಗುತ್ತಿರುವ ಕುರಿತು ಹೆಮ್ಮೆಯಿಂದ ಮಾತನಾಡಿದ್ದರು. ಕಳೆದ ೧೦ ವರ್ಷಗಳಲ್ಲಿ ಭಾರತ ಅದ್ಭುತವಾದ ಅಭಿವೃದ್ಧಿ ಸಾಧಿಸಿದೆ ಎಂದಿದ್ದರು.
ರಶ್ಮಿಕಾ ಹೇಳಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ನಟ ಚೇತನ್, ಭಾರತದ ಆದಾಯ ಅಸಮಾನತೆ ಗಗನಕ್ಕೇರಿದೆ ಮತ್ತು ಪ್ರಜಾಪ್ರಭುತ್ವದ ಸ್ವಾತಂತ್ರ್ಯಗಳು ದಾಳಿಗೆ ಒಳಗಾಗಿವೆ. ಯಾವುದೇ ಮೂರ್ಖ ಪಕ್ಷವು ಕಾಂಕ್ರೀಟ್ ಸುರಿಯಬಹುದು ಮತ್ತು ಸೌಕರ್ಯಗಳನ್ನು ನಿರ್ಮಿಸಬಹುದು. ಸಮಾಜವನ್ನು ಸುಸ್ಥಿರವಾಗಿ ಮತ್ತು ಸಮಾನವಾಗಿ ಅಭಿವೃದ್ಧಿಪಡಿಸಲು ನಿಜವಾದ ಒಳನೋಟದ ಅಗತ್ಯವಿದೆಎಂದು ಎಕ್ಸ್‌ನಲ್ಲಿ ಚೇತನ್ ಬರೆದುಕೊಂಡಿದ್ದಾರೆ.