ಏಡ್ಸ್ ಜಾಗೃತಿ ಕುರಿತು ಮ್ಯಾರಥಾನ್
ವಿಜಯಪುರ.ಸೆ.೨೩-“ಯುವಜನೋತ್ಸವ” ಪ್ರಯುಕ್ತ ಪಟ್ಟಣದಲ್ಲಿ ಜಿಲ್ಲಾಮಟ್ಟದ ಐದು ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆಯ ಮೂಲಕ ಎಚ್‌ಐವಿ\ಏಡ್ಸ್ ಕುರಿತ ಜನಜಾಗೃತಿ ಮ್ಯಾರಥಾನ್ ನಡೆಯಿತು.
ಪಟ್ಟಣದ ಪ್ರಗತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಜನಸೇವೆ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಪ್ರಗತಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕ ಇವರುಗಳ ಸಂಯುಕ್ತಾಶಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳ ಹಾಗೂ ಜಿಲ್ಲೆಯ ವಿವಿಧ ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ “ಯುವಜನೋತ್ಸವ” ಪ್ರಯುಕ್ತ ಜಿಲ್ಲಾಮಟ್ಟದ ಐದು ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆಯ ಮೂಲಕ ಎಚ್‌ಐವಿ\ಏಡ್ಸ್ ಕುರಿತ ಜನಜಾಗೃತಿ ಮ್ಯಾರಥಾನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಸುನಿಲ್ ಕುಮಾರ್,ಪ್ರಗತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್ ನಾಗರಾಜ್,ಎನ್ ಎಸ್ ಎಸ್ ಘಟಕದ ಮುಖ್ಯಸ್ಥರಾದ ಶೆಟ್ಟಿ ನಾಯಕ್, ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಿಕಿ ಸುಮ, ನಾಡಕಚೇರಿಯ ಲೆಕ್ಕಾಧಿಕಾರಿ ಮಡಿವಾಳಪ್ಪ ಆರೋಗ್ಯ ಇಲಾಖೆಯ ರಾಜೇಂದ್ರ, ಜಿಲ್ಲಾ ಮೇಲ್ವಿಚಾರಕರಾದ ರಮೇಶ್ ನೆಹರು ಯುವ ಕೇಂದ್ರದ ವಾಣಿ ಕೋನರೆಡ್ಡಿ ಉಪಸ್ಥಿತರಿದ್ದರು.