ಅ.3ರಿಂದ ದಸರಾ ಕುಸ್ತಿ ಪಂದ್ಯಗಳಿ
ಸಂಜೆವಾಣಿ ನ್ಯೂಸ್
ಮೈಸೂರು: ಸೆ.23:– ದಸರ ಆಕರ್ಷಣೆಯಲ್ಲಿ ನಾಡ ಕುಸ್ತಿಯು ಸಹಾ ಗಮನ ಸೇಳೆಯಲ್ಲಿದ್ದು, ಈ ಭಾರಿ ಅ.3 ರಿಂದ ಅ. 9ರವರೆಗೂ ನಡೆಯಲ್ಲಿರುವ ಕುಸ್ತಿ ಪಂದ್ಯಗಳಿಗೆ 250 ಜೋಡಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ದಸರಾ ಕುಸ್ತಿ ಉಪ ಸಮಿತಿಯ ವಿಶೇಷಾಧಿಕಾರಿಗಳಾದ ಅಪರ ಪೆÇಲೀಸ್ ಅಧೀಕ್ಷಕರಾದ ನಾಗೇಶ್ ತಿಳಿಸಿದರು.
ಅವರು ನಗರದ ವಸ್ತುಪ್ರದರ್ಶನ ಆವರಣದ ಪಿ. ಕಾಳಿಂಗರಾವ್ ಗಾನ ಮಂಟಪದಲ್ಲಿ ದಸರಾ ಕುಸ್ತಿ ಉಪ ಸಮಿತಿಯಿಂದ ನಾಡ ಕುಸ್ತಿಗೆ ಜೋಡಿ ಕಟ್ಟುವ ಪ್ರಕ್ರಿಯೆಗೆ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪನವರು ಚಲಾನೆ ನೀಡಿದ ಸಂದರ್ಶನದಲ್ಲಿ ತಿಳಿಸಿದರು. ವಿವಿಧ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಕುಸ್ತಿಪಟುಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಕುಸ್ತಿಪಟುಗಳ ವಯಸ್ಸು, ತೂಕದ ಆಧಾರದಲ್ಲಿ 250 ಜೊತೆ ಕುಸ್ತಿ ಪಟುಗಳನ್ನು ಆಯ್ಕೆ ಮಾಡಲಾಗಿದೆ.7 ದಿನಗಳ ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ಪ್ರತಿ ದಿನ 35-40 ಜೋಡಿಗಳಂತೆ ಸ್ಪರ್ಧೆ ನಡೆಯಲಿದೆ. ಕಳೆದ ಬಾರಿ 220 ಜೋಡಿಗಳು ಪಾಲ್ಗೊಂಡಿದ್ದವು. ಈ ಬಾರಿ 30 ಹೆಚ್ಚುವರಿ ಜೋಡಿಗಳು ಸೆಣೆಸಾಟಕ್ಕೆ ಸಿದ್ಧರಾಗಿದ್ದಾರೆ.
ಇದೇ ಮೊದಲ ಬಾರಿಗೆ 17 ವರ್ಷ ವಯಸ್ಸಿನೊಳಗಿನವರ ವಿಭಾಗದಲ್ಲೂ ಸ್ಪರ್ಧೆಗೆ ಅವಕಾಶ ಕಲ್ಪಿಸಲಾಗಿದೆ.ನಾಡ ಕುಸ್ತಿ ಜೊತೆಗೆ ಪಾಯಿಂಟ್ ಕುಸ್ತಿ, ಪಂಜಾ ಕುಸ್ತಿ ಸ್ಪರ್ಧೆಗಳೂ ನಡೆಯಲಿವೆ. ಪುರುಷ ಹಾಗೂ ಮಹಿಳೆಯರೂ ಸೇರಿ ಒಟ್ಟು 14 ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.ಈ ಬಾರಿಯ ದಸರಾ ಕುಸ್ತಿಯಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಯುವಕರನ್ನು ಕುಸ್ತಿಯತ್ತ ಸೆಳೆಯಲು 17 ವರ್ಷದ ಒಳಗಿನವರ ವಿಭಾಗವನ್ನೂ ಸೇರ್ಪಡೆಗೊಳಿಸಲಾಗಿದೆ’ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಮಾತನಾಡಿ ಮೈಸೂರು ಮಹಾರಾಜರು ಕುಸ್ತಿಯನ್ನು ಪೆÇ್ರತ್ಸಾಹ ಮಾಡಿದ್ದರಿಂದ ಹಳೇ ಮೈಸೂರು ಭಾಗದಲ್ಲಿ ಜಗಜಟ್ಟಿ ಪೈಲ್ವಾನರು ಬೆಳಕಿಗೆ ಬಂದರು. ರುದ್ರ ಮೂಗ, ಬಾಲಾಜಿ, ಉರಿಬತ್ತಿ ನಂಜಯ್ಯ, ದಿಲ್ದಾರ್ ರಿಯಾಜ್ ಮೊದಲಾದವರು ರಾಷ್ಟ್ರ ಮಟ್ಟದಲ್ಲಿ ಮಿಂಚಿದ್ದರು. ಆದರೆ ಇತ್ತೀಚೆಗೆ ಮೈಸೂರಿನಲ್ಲೇ ಕುಸ್ತಿಪಟುಗಳು ಕಡಿಮೆಯಾಗುತ್ತಿದ್ದಾರೆ. ಹೀಗಾಗಿ ಇಲ್ಲಿನ ಗರಡಿ ಮನೆಗಳನ್ನು ಸದೃಢಗೊಳಿಸಿ, ಅಲ್ಲಿ ನುರಿತ ತರಬೇತುದಾರರನ್ನು ನೇಮಕ ಮಾಡಲು ಸರ್ಕಾರ ಕಾರ್ಯಪ್ರವೃತ್ತವಾಗಲಿದೆ’ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೆÇಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ, ಎನ್.ಸಿ. ವೆಂಕಟರಾಜು, ರಾಜ್ಯ ಕುಸ್ತಿ ಸಂಘದ ತಾಂತ್ರಿಕ ಅಧಿಕಾರಿ ಕೆ. ವಿನೋದ್‍ಕುಮಾರ್, ಹಿರಿಯ ಪೈಲ್ವಾನರಾದ ರಂಗಪ್ಪ, ನಂಜಪ್ಪ, ಛೋಟ ರಫೀಕ್, ಕೆಂಪೇಗೌಡ, ಅಮೃತ ಪುರೋಹಿತ ಉಪಸ್ಥಿತರಿದ್ದರು.