ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ 30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್
ಸಂಜೆವಾಣಿ ವಾರ್ತೆ
ಪಿರಿಯಾಪಟ್ಟಣ,ಮೇ17:- ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.
ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಪೆÇಲೀಸರು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ನಟೇಶ್ ಎಂಬುವರಿಗೆ ಆಹಾರ ಪೂರೈಕೆ ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚಕ್ಕೆ ವಿಜಯ್ ಕುಮಾರ್ ಬೇಡಿಕೆ ಇಟ್ಟಿದ್ದರು.ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆಯು ಲೋಕಾಯುಕ್ತ ಎಸ್ಪಿ ಸಜಿತ್ ಮಾರ್ಗ ದರ್ಶನ ದಲ್ಲಿ ಡಿವೈಎಸ್ಪಿ ಕೃಷ್ಣಯ್ಯ. ವಿ ಹಾಗೂ ಲೋಕಾಯುಕ್ತ ಪೆÇಲೀಸ್ ಇನ್ಸ್ಪೆಕ್ಟರ್ ಗಳಾದ ರವಿಕುಮಾರ್, ರೂಪಶ್ರೀ, ಲೋಕೇಶ್ ಹಾಗೂ ಸಿಬ್ಬಂದಿಗಳು ಮೋಹನ್ ಗೌಡ, ವೀರಭದ್ರ ಸ್ವಾಮಿ, ಆಶಾ, ತ್ರಿವೇಣಿ, ಪುಷ್ಪ ಲತಾ, ದಿನೇಶ್, ಲೋಕೇಶ್, ಪೃಥ್ವಿಷ, ಮೋಹನ್ ಗೌಡ, ಶೇಖರ್, ಲೋಕೇಶ್ ರವರು ಯಶಸ್ವಿಗೊಳಿಸಿದ್ದಾರೆ.