ಟ್ರ್ಯಾಕ್ಟರ್-ಬೈಕ್ ಮಧ್ಯೆ ಡಿಕ್ಕಿ: ಓರ್ವ ಸಾವು, ಇನ್ನೋರ್ವನಿಗೆ ಗಾಯ
ಕಲಬುರಗಿ,ಮೇ.16-ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಗರಗಾ ಕ್ರಾಸ್ ಹತ್ತಿರ ಇಂದು ಬೆಳಿಗ್ಗೆ 9.30ರ ಸುಮಾರಿಗೆ ನಡೆದಿದೆ.
ಮೃತನನ್ನು ಖಾಜಾ ಕೋಟನೂರ ಗ್ರಾಮದ ಆರೀಫ್ ಪಟೇಲ್ (22) ಎಂದು ಗುರುತಿಸಲಾಗಿದ್ದು, ನಬಿ (20) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.