ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡಬಾರದು ಎಂದು ಒತ್ತಾಯಿಸಿ ಎಬಿವಿಪಿ ಬೃಹತ್ ಪ್ರತಿಭಟನೆ
ಬೀದರ:ಮೇ.16:ಬ್ರಿಟಿಷ್ ಶಿಕ್ಷಣ ನೀತಿಯಿಂದ ಮುಕ್ತರಾಗಿ ಭಾರತೀಯ ಶಿಕ್ಷಣ ಪಡೆಯುವಂತಾಗಬೇಕು ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿ ಜಾರಿಗೆ ತಂದಿದೆ. ಯಾವುದೇ ಕಾರಣಕ್ಕೆ ಇದನ್ನು ಹಿಂಪಡೆಯಬಾರದು. ಭಾರತೀಯ ಶಿಕ್ಷಣ ನೀತಿ ಜಾರಿ ಹಾಗೂ ಕೌಶಲಯುಕ್ತ ಯುವಶಕ್ತಿ ನಿರ್ಮಾಣಕ್ಕೆ ಇದು ಅಗತ್ಯವಾಗಿದೆ’ ‘ಎನ್‍ಇಪಿ ಅನ್ನು ಮೊದಲ ಬಾರಿಗೆ ಅನುಷ್ಠಾನಗೊಳಿಸಿದ್ದು ಕರ್ನಾಟಕ ರಾಜ್ಯ, ಚುನಾವಣಾ ಪ್ರಣಾಳಿಕೆಯಲ್ಲಿ ಎನ್‍ಇಪಿ ತೆಗೆಯುವುದಾಗಿ ಹೇಳಿದ ಕಾರಣಕ್ಕಾಗಿಯೇ ಹೊಸ ಶಿಕ್ಷಣ ನೀತಿಯನ್ನು ಬದಲಾವಣೆ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಸರ್ಕಾರದ ಈ ನಡೆಯನ್ನು ಎಬಿವಿಪಿ ಖಂಡಿಸುತ್ತದೆ ಮುಂದಿನ 20-25 ವರ್ಷಗಳನ್ನು ಗಮನದಲ್ಲಿ ಇರಿಸಿಕೊಂಡು ಇಡೀ ದೇಶಕ್ಕೆ ಅನ್ವಯವಾಗುವಂತಹ ಒಂದೇ ಬಗೆಯ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರವು ರಾಷ್ಟ್ರೀ ಯತೆಯನ್ನು ತುಂಡರಿಸಿ, ಪ್ರತ್ಯೇಕತೆಯತ್ತ ಹೆಜ್ಜೆ ಇರಿಸುತ್ತಿರುವುದು ಸರಿಯಲ್ಲ. ರಾಜ್ಯದ ಬೆಳೆವಣಿಗೆಗೆ ಇದು ಹಿನ್ನಡೆಯಾ ಗಲಿದೆ. ಕೂಡಲೇ ರಾಜ್ಯ ಸರ್ಕಾರವು ಈ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು. ಇಲ್ಲದಿದ್ದರೇ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ಸಂಚಾಲಕ ಶಶಿಕಾoತ ರಾಕಲೇ ಒತ್ತಾಯಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಕಾರ್ಯಕರ್ತರು ಅಂಬೇಡ್ಕರ್ ವೃತ್ತ ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮಾಡಿದರು.
ಇದೇ ಸಂದರ್ಭದಲ್ಲಿ. ರಾಜ್ಯ ಕಾರ್ಯಕಾರಿ ಸದಸ್ಯ ಸಾಯಿ, ಬೋಸ್ಲೆ ತಾಲೂಕು ಸಂಚಾಲಕ ಅಂಬ್ರೇಶ, ಬಿರಾದಾರ್, ನಾಗರಾಜ, ಅಮರ್ ಸ್ವಾಮಿ, ಅಭಿಷೇಕ್ ಶಂಭು, ಮಹೇಶ್ ಆನಂದ್, ಸಿದ್ದರಾಮೇಶ್ವರ ಪವನ್ ಪಾಂಚಾಳ್, ಶಿವಶರಣು ಸಂಗಮೇಶ್ ಮೂಳೆ , ವಿದ್ಯಾರ್ಥಿನಿ ಪೂಜಾ ಅಂಬಿಕಾ ಉಪಸ್ಥಿತರಿದ್ದರು