ಅಂಜಲಿ ಹತ್ಯೆ ಖಂಡಿಸಿ ಭಾರೀ ಆಕ್ರೋಶ
ಹುಬ್ಬಳ್ಳಿ, ಮೇ 16: ನಗರದಲ್ಲಿ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ವೀರಾಪೂರ ಓಣಿಯಿಂದ ಶಹರ ಪೊಲೀಸ್ ಠಾಣೆವರೆಗೆ ಪ್ರತಿಭಟನಾ ರ್ಯಾಲಿ ಮಾಡಿದ ಬಿಜೆಪಿ ಕಾರ್ಯಕರ್ತರು, ಪಗಡಿಗಲ್ಲಿಯಲ್ಲಿ ಟೈರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಂಜಲಿ ಹತ್ಯೆಗೈದ ಆರೋಪಿ ವಿಶ್ವನಾಥ ಅಲಿಯಾಸ್ ಗಿರೀಶ್ ಸಾವಂತಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು, ಪೆÇಲೀಸ್ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಹತ್ಯೆಯು ಹುಬ್ಬಳ್ಳಿಯನ್ನು ಬೆಚ್ಚಿ ಬೀಳುಸುವಂತೆ ಮಾಡಿದೆ. ಸರ್ಕಾರದ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತಿದ್ದು, ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.
ಆರೋಪಿ ಬೆದರಿಕೆ ಹಾಕಿದ್ದಾಗ ಅಂಜಲಿ ಸಹೋದರಿ ಹಾಗೂ ಆಕೆಯ ಅಜ್ಜಿ ಈ ಕುರಿತು ದೂರಿದ್ದಾಗಲೇ ಬೆಂಡಿಗೇರಿ ಠಾಣೆಯ ಪೆÇಲೀಸರು ಎಚ್ಚೆತ್ತುಕೊಂಡಿದ್ದರೇ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದರು. ಈ ಪರಿಸ್ಥಿತಿಗೆ ಪೆÇಲೀಸರ ನಿರ್ಲಕ್ಷ್ಯವೇ ಕಾರಣ ಎಂದರು.
ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಈಗ ಜನಾಕ್ರೋಶ ಎಷ್ಟಿದೆ ಎಂದರೆ ಇಂತಹ ಆರೋಪಿಗಳನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಜನರು ಕಾನೂನು ಕೈಗೆತ್ತಿಕೊಳ್ಳುವ ಮುನ್ನ ಸರ್ಕಾರವೇ ಸರಿಯಾದ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದರು.
ಅಂಜಲಿ ಹತ್ಯೆ ಖಂಡಿಸಿ ನಗರದ ಚನ್ನಮ್ಮ ವೃತ್ತದಲ್ಲಿಯೂ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.