ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೧೬;: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದಲದ ಜಿಲ್ಲೆಯ 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ ತಾಲ್ಲೂಕು/ಶಾಖೆಗಳ ಅಧ್ಯಕ್ಷರ ಸಹಿಯೊಂದಿಗೆ ದೃಢೀಕರಿಸಿ ಆನ್ ಲೈನ್ ನಲ್ಲಿ ಅಪ್ ಲೋಡ್ ಮಾಡಬೇಕು. ನಿಗಮ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ. ಕೋರಿರುವ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ ಲೋಡ್ ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನವಾಗಿರುತ್ತದೆ.ಹೆಚ್ಚಿನ ಮಾಹಿಗಾಗಿ ಮೊಬೈಲ್ ಸಂಖ್ಯೆ 97424 72623 ಸಂಪರ್ಕಿಸಲು ಸಂಘದ ಜಿಲ್ಲಾಧ್ಯಕ್ಷ ವೀರೇಶ ಎಸ್. ಒಡೇನಪುರ ಕೋರಿದ್ದಾರೆ