ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ; ಪರಿಹಾರಕ್ಕೆ ಕ್ರಮ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮೇ.೧೪; ಕಳೆದ ಎರೆಡು ದಿನಗಳಿಂದ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಹಾಗೂ ಗ್ರಾಮಗಳಿಗೆ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಅವರು ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಂಡರು. ಕ್ಷೇತ್ರದ ಮಲ್ಲಾಪುರ ಗ್ರಾಮದ ಡಾ.ಅಂಬೇಡ್ಕರ್ ಕಾಲೋನಿಗೆ ಭೇಟಿ ಮಾಡಿ, ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಹಾಗೂ ತಂತ್ರಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಿ, ಕೂಡಲೇ ಪರಿಹಾರ ಹಣವನ್ನು ನೊಂದವರ ಖಾತೆಗಳಿಗೆ ಜಮಾ ಆಗುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲಾಪುರ ಡಾ.ಅಂಬೇಡ್ಕರ್ ಕಾಲೋನಿಯಲ್ಲಿ ಮೂರು ಮನೆಗಳು ಪೂರ್ಣ ಹಾಳಾಗಿದ್ದು, 1.20 ಲಕ್ಷ ರೂ. ಪರಿಹಾರ ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳ ಫಲಾನುಭವಿಗಳಿಗೆ 11.400 ರೂ.ಗಳನ್ನು ಪರಿಹಾರದ ಮೊತ್ತವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಾಮಾ ಮಾಡಲಾಯಿತು. ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗವೇಣಿ, ಕಂದಾಯ ನಿರೀಕ್ಷಕ ಪ್ರಾಣೇಶ್, ಗ್ರಾಮಲೆಕ್ಕಾಧಿಕಾರಿ ಯಶೋಧಮ್ಮ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.