ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆಯಾಗಬೇಕು; ಸೈಯದ್ ಖಾಲಿದ್ ಅಹ್ಮದ್

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.16: ಹಾಸನದಲ್ಲಿ ಲೈಂಗಿಕ ಹಗರಣ ಕುರಿತಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಕರೆ ತರಂದು ಕಾನೂನು ಪ್ರಕಾರ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಅಖಿಲ ಭಾರತೀಯ ಯುವ ರಾಷ್ಟ್ರೀಯ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಜೆಡಿಎಸ್ ಪಕ್ಷದಷ್ಟೇ ಹೊಣೆ ಬಿಜೆಪಿಗೂ ಇದೆ. ಮೈತ್ರಿ ಧರ್ಮ ಪಾಲನೆ ಮಾಡಬೇಕಿರುವುದರಿಂದ ಈ ಕಳಂಕವನ್ನು ಬಿಜೆಪಿಯು ಹೊತ್ತುಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರೇ ಕಳಂಕಿತ ಅಭ್ಯರ್ಥಿ ಪ್ರಜ್ವಲ್ ರೇವಣ್ಣರ ಪರ ಪ್ರಚಾರ ನಡೆಸಿ ಮತ ನೀಡುವಂತೆ ಮತಯಾಚನೆ ಮಾಡಿರುವುದು  ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಹೇಳಿದ್ದಾರೆ.