ಡಿಆರ್ ಎಂ ಕಾಲೇಜಿನಲ್ಲಿ ಉಪನ್ಯಾಸ
ಸಂಜೆವಾಣಿ ವಾರ್ತೆ
ದಾವಣಗೆರೆ. ಮೇ.16; ನಗರದ ಡಿಆರ್ ಎಂ ವಿಜ್ಞಾನ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ವಿರೋಧಿ ಕೋಶ ಮತ್ತು ಆ್ಯಂಟಿ ರ್ಯಾಗಿಂಗ್ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಕೀಲಾರಾದಸಿ.ಪಿ ಅನಿತಾ ಆಗಮಿಸಿದ್ದರು ಹಾಗೂ ಮಹಿಳೆ ಮತ್ತು ಮಕ್ಕಳ‌ ಕಿರುಕುಳದ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಎಂ.ಪಿ ರೂಪಶ್ರೀ ವಹಿಸಿದ್ದರು. ಸಂಚಾಲಕರಾದ ಡಾ.ಸೌಮ್ಯ ಹೆಚ್.ಬಿ.ವಿ ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾ.ವಸಂತನಾಯ್ಕ್ ಎಲ್ಲಾ ಬೋಧಕ‌ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.