ಮೇ 16 ಹಾಗೂ 17 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ:ಮೇ.15:ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಸರಡಗಿ ಪಂಪ್‍ಹೌಸನಲ್ಲಿರುವ 1118 ಎಂ.ಎಂ. ವ್ಯಾಸದ ಎಂ.ಎಸ್. ಕೊಳವೆ ಮಾರ್ಗದಲ್ಲಿ ಸೋರುವಿಕೆ ಕಂಡು ಬಂದಿದ್ದು, ಇದರ ತುರ್ತು ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಇದೇ ಮೇ 16 ಹಾಗೂ 17 ರಂದು ಎರಡು ದಿನಗಳ ಕಾಲ ಕಲಬುರಗಿ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.