ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಸಂಪೂರ್ಣ ಸುಟ್ಟು ಭಸ್ಮ ಅಪಾರ ಹಾನಿ.ಕುಟುಂಬಸ್ಥರಿಗೆ ಶಾಸಕ ಲಕ್ಷ್ಮಣ ಸವದಿ ಸಹಾಯಹಸ್ತ
ಅಥಣಿ :ಮೇ.15: ಪಟ್ಟಣದ ಹೊರವಲಯದ ಗ್ರಾಮೀಣ ಪ್ರದೇಶದ ಹಳೆಯ ತಂಗಡಿ – ಶಿನಾಳ ರಸ್ತೆಗೆ ಹೊಂದಿಕೊಂಡಿರುವ ಒಂದೇ ಕುಟುಂಬದ 3 ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸಾಕುಪ್ರಾಣಿಗಳ ಪ್ರಾಣ ಹಾನಿ ಸೇರಿದಂತೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಹಮಜಾಅಲಿ ಆದಮಸಾಬ ಬಾಳೋಬಾ ಇವರಿಗೆ ಸೇರಿದ ಗುಡಿಸಲಿಗೆ ಬೆಂಕಿ ತಗಲಲು ಕಾರಣ ಏನೆಂಬುದು ನಿಖರವಾಗಿ ತಿಳಿದು ಬಂದಿಲ್ಲ. ಈ ಕುರಿತು ಅಥಣಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ವಿವರ : ಗುಡಿಸಲು ಮನೆಯಲ್ಲಿ ಯಾರು ಇಲ್ಲದ ಸಮಯ ಸೋಮವಾರ ಮಧ್ಯಾಹ್ನ 1 – 30 ಗಂಟೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿಯ ಕೆನ್ನಾಲಿಗೆಗೆ ಅಡುಗೆ ಸಿಲಿಂಡರ್ ಸೋರಿಕೆಯಾಗಿ ಪಕ್ಕದಲ್ಲಿದ್ದ ಇನ್ನು ಎರಡು ಗುಡಿಸಲುಗಳಿಗೆ ಬೆಂಕಿ ಆವರಿಸಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಗುಡಿಸಿಲಿನಲ್ಲಿದ್ದ 5 ಮೇಕೆಗಳು, 6 ಕೋಳಿಗಳು ಸಾವನ್ನಪ್ಪಿದ್ದು, ಗುಡಿಸಲುಗಳಲ್ಲಿದ್ದ 2 ಬೈಕ್, ದವಸ ಧಾನ್ಯಗಳು, ಸುಮಾರು 22 ತೊಲೆ ಚಿನ್ನಾಭರಣ.
ಸುಮಾರು 80 ತೊಲೆ ಬೆಳ್ಳಿಯ ಆಭರಣಗಳು, ಸುಮಾರು 70 ಸಾವಿರ ರೂಪಾಯಿ ನಗದು ಸೇರಿದಂತೆ ಗೃಹಬಳಿಕೆಯ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ. ನೆರೆಹೊರೆಯ ಜನರು ಅಗ್ನಿಶಾಮಕ ಠಾಣಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಹೊಲ ಕೆಲಸದಲ್ಲಿ ತೊಡಗಿದ್ದರಿಂದ ಗುಡಿಸಿಲಿನಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಗೃಹಬಳಕೆ ವಸ್ತುಗಳು ಮತ್ತು ಸಾಕು ಪ್ರಾಣಿಗಳು ಸಾವನ್ನಪ್ಪಿವೆ.
ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಎಂ ಎಂ ಮಿರ್ಜಿ , ಪಶು ವೈದ್ಯಾಧಿಕಾರಿಗಳು, ಪೆÇಲೀಸ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಬೆಂಕಿ ಅವಘಡದಿಂದ ಹಾನಿಗೊಳಗಾದ ಕುಟುಂಬಸ್ಥರು ಹಾಗೂ ಮುಸ್ಲಿಂ ಮುಖಂಡರಾದ ಯೂನುಸ್ ಮುಲ್ಲಾ. ಅಬ್ದುಲಅಜೀಜ ಮುಲ್ಲಾ. ದಾದಾಪೀರ ಜಮಾದಾರ ಅವರು ಮಂಗಳವಾರ ಮುಂಜಾನೆ ಶಾಸಕ ಲಕ್ಷ್ಮಣ ಸವದಿ ಅವರಿಗೆ ಭೇಟಿಯಾಗಿ ವಿಷಯ ತಿಳಿಸಿದರು. ವಿಷಯ ತಿಳಿಯುತ್ತಿದ್ದಂತೆಯೇ ಶಾಸಕ ಲಕ್ಷ್ಮಣ ಸವದಿ ತಕ್ಷಣ ಅಧಿಕಾರಿಗಳೊಂದಿಗೆ ಪೆÇೀನ್ ಮುಖಾಂತರ ಸಂಪರ್ಕಿಸಿ ಸರ್ಕಾರದ ನಿಯಮಾನುಸಾರ ಭಾದಿತ ಕುಟುಂಬದವರಿಗೆ ಪ್ರಕೃತಿ ವಿಕೋಪ ಪರಿಹಾರ ಯೋಜನೆಯಡಿ ಶೀಘ್ರದಲ್ಲಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕೆಂದು ತಹಸೀಲ್ದಾರ್ ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಮನೆ ಕಳೆದುಕೊಂಡ ಕುಟುಂಬದವರಿಗೆ ವೈಯಕ್ತಿಕವಾಗಿ ಧನ ಸಹಾಯ ನೀಡುವ ಮೂಲಕ ಸಾಂತ್ವನ ಹೇಳಿ ಧೈರ್ಯ ತುಂಬಿ ಸರ್ಕಾರದಿಂದ ಪರಿಹಾರ ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.