ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಿಂದ ಬಿದ್ದು ಕಾರ್ಮಿಕ ಸಾವು
ವಿಜಯಪುರ, ಮೇ.15 :ಜಿಲ್ಲೆಯ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಕಾರ್ಮಿಕನೊಬ್ಬ ಬಿದ್ದು ಮೃತಪಟ್ಟ ಅವಘಡ ಸಂಭವಿಸಿದೆ.
ಉತ್ತರ ಪ್ರದೇಶದ ಗಾಜಿಪುರ ಮೂಲದ
ಕಿಶನಕುಮಾರ ಭಾರದ್ವಾಜ್ (32) ಮೃತ ಕಾರ್ಮಿಕ.
ಉಷ್ಣ ವಿದ್ಯುತ್ ಸ್ಥಾವರದ ಚಿಮಣಿಯಲ್ಲಿ ಕೇಬಲ್ ಅಳವಡಿಸುತ್ತಿದ್ದ ಕಾರ್ಮಿಕ ಆಯತಪ್ಪಿ 133 ಅಡಿ ಎತ್ತರದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.
ಇಂಡಿಯನ್ ಬ್ಯಾಗ್ ಪ್ರೈವೇಟ್ ಲಿಮಿಟೆಡ್ ಮೂಲಕ ಎನ್ಟಿಪಿಸಿಯಲ್ಲಿ ಕಳೆದ ಮೂರು ವರ್ಷಗಳಿಂದ ಕಾರ್ಮಿಕ ಕೆಲಸ ಮಾಡುತ್ತಿದ್ದ.
ನಿನ್ನೆ ಸಾಯಂಕಾಲ ಈ ಅವಘಡ ನಡೆದಿದೆ.
ಕಾರ್ಮಿಕನ ಸಾವಿಗೆ ಸಹ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೂಕ್ತ ರಕ್ಷಣೆ ಇಲ್ಲದೇ ಕೆಲಸ ಮಾಡಿಸಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಈ ದುರ್ಘಟನೆಯಿಂದ ಆಕ್ರೋಶಗೊಂಡ ಕಾರ್ಮಿಕರು ಎನ್ಟಿಪಿಸಿ ಎದುರಿಗೆ ಕೆಲ ಹೊತ್ತು ಪ್ರತಿಭಟನೆ ನಡೆಸಿದರು.
ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದೂ ಕಾರ್ಮಿಕರು ಒತ್ತಾಯಿಸಿದರು.
ಕೂಡಗಿ ಎನ್ಟಿಪಿಸಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ
ಕೊಲ್ಹಾರ ತಾಲೂಕಿನ ಕೂಡಗಿ ಬಳಿ ಇರುವ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಈ ಅವಘಡ ನಡೆದಿದೆ.