ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲಕುಮಾರ ಮೋದಿ ನಿಧನಕ್ಕೆ ಸಂತಾಪ
ಬೀದರ,ಮೇ.15: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಹಾಲಿ ರಾಜ್ಯಸಭಾ ಸದಸ್ಯ ಸುಶೀಲಕುಮಾರ ಮೋದಿಯವರ ನಿಧನಕ್ಕೆ ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಹುಡಗಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸುಶೀಲಕುಮಾರ ಮೋದಿಯವರ ನಿಧನದಿಂದ ಭಾರತೀಯ ಜನತಾ ಪಾರ್ಟಿಗೆ ದೊಡ್ಡ ನಷ್ಟವಾಗಿದ್ದು, ಸರಳ ಸಜ್ಜನತೆಯ ವ್ಯಕ್ತಿತ್ವ ಹೊಂದಿದ್ದ ನಾಯಕರನ್ನು ಕಳೆದುಕೊಂಡಿರುವುದು ದುಃಖದ ಸಂಗತಿಯಾಗಿದೆ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.