ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ
ಕಲಬುರಗಿ,ಮೇ.14-ನಗರದಲ್ಲಿ ಇತ್ತಿಚಿಗೆ ಯುವಕರನ್ನು ನಗ್ನಗೊಳಿಸಿ ಹಿಂಸೆ ನೀಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶ್ವವಿದ್ಯಾಲಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿತರನ್ನು ಬಂಧಿಸಲಾಗಿದೆ. ಈ ಸಂಬಂಧ ಯುವಕರನ್ನು ನಗ್ನಗೊಳಿಸಿ ಹಿಂಸೆ ನೀಡುತ್ತಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಯಾರೂ ಹಂಚಿಕೊಳ್ಳಬಾರದು ಹಾಗೂ ಈ ವಿಡಿಯೋಗಳನ್ನು ತಮ್ಮ ಮೊಬೈಲ್‍ಗಳಲ್ಲಿ ಯಾರು (ಸೇವ್) ಉಳಿಸಿಕೊಳ್ಳಬಾರದು. ವಿನಾಕಾರಣ ಸದರಿ ವಿಡಿಯೋಗಳನ್ನು ಹಂಚಿಕೊಳ್ಳುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ನಗರ ಪೊಲೀಸ್ ಆಯುಕ್ತ ಚೇತನ್ ಆರ್.ತಿಳಿಸಿದ್ದಾರೆ.