ಕೆ.ಆರ್.ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ನನ್ನ ಗುರಿ: ಶಾಸಕ ಟಿ ಎಸ್ ಶ್ರೀವತ್ಸ
ಸಂಜೆವಾಣಿ ನ್ಯೂಸ್
ಮೈಸೂರು, ಮೇ 14-ಮೈಸೂರಿನ ಕೆ ಆರ್ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಟಿ ಎಸ್ ಶ್ರೀವತ್ಸರವರು ತಿಳಿಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಶ್ರೀವತ್ಸ ಅವರು ಶಾಸಕರಾಗಿ ಒಂದು ವರ್ಷ ಪೂರೈಸಿದ್ದು ಈ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಶಾಸಕರು ತಿಳಿಸಿದರು.
ಕ್ಷೇತ್ರದ ಸಾರ್ವಜನಿಕರೊಂದಿಗೆ ಸತತ ಸಂಪರ್ಕದಲ್ಲಿ ಇರಬೇಕೆಂಬ ಹಿನ್ನೆಲೆಯಲ್ಲಿ ಮನೆಮನೆಗಳಿಗೆ ಪಾದಯಾತ್ರೆ ಮೂಲಕ ತೆರಳಿ ನನ್ನ ದೂರವಾಣಿ ಸಂಖ್ಯೆ ಹಾಗೂ ಆಪ್ತ ಸಹಾಯಕರ ದೂರವಾಣಿ ಸಂಖ್ಯೆ ಮತ್ತು ಕಚೇರಿ ವಿಳಾಸವನ್ನು ಸುಮಾರು 60 ಸಾವಿರಕ್ಕೂ ಯ ಹೆಚ್ಚು ಕಾರ್ಡುಗಳನ್ನು ವಿತರಿಸಲಾಗಿದ್ದು ಈ ಮೂಲಕ ಹಲವಾರು ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳೊಂದಿಗೆ ಪರಿಹರಿಸಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿನ ಲಲಿತಾದ್ರಿಪುರದಲ್ಲಿ 940 ಆಶ್ರಯ ಗುಂಪು ಯೋಜನೆ ಯಡೆ 940 ಮಂದಿ ಕ್ಷೇತ್ರದ ಜನತೆಗೆ ಹಾಗೂ 500 ಮಂದಿ ವರುಣ ಕ್ಷೇತ್ರದ ಜನತೆಗೆ ಈ ಯೋಜನೆ ಅಡಿ ಮನೆಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದವರು ಹೇಳಿದರು.
ಲಲಿತಾದ್ರಿಪುರ ಕೆಆರ್ ಕ್ಷೇತ್ರದಲ್ಲಿದ್ದರೂ ವರುಣ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಬರುತ್ತದೆ ಹಾಗಾಗಿ ಇಲ್ಲಿ ಎರಡು ಕ್ಷೇತ್ರದ ಫಲಾನುಭವಿಗಳಿಗೆ ಮನೆಗಳನ್ನು ವಿತರಿಸುವ ಮೂಲಕ ಕ್ರಮ ಕೈಗೊಳ್ಳಲಾಗಿದೆ ಎಂದವರು ತಿಳಿಸಿ ಇದಕ್ಕಾಗಿ 13 ಎಕರೆ ಜಾಗವನ್ನು ಪಡೆದು 202 ಕೋಟಿ ರೂ. ವೆಚ್ಚದಲ್ಲಿ ಆಶ್ರಯ ಗುಂಪು ಮನೆ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಈ ಕ್ಷೇತ್ರದ ಪ್ರಮುಖ ಸಮಸ್ಯೆಗಳಲ್ಲಿ ಒಂದಾದ ಸುಯೆಜ್ ಫಾರಂ ಎಕ್ಸೆಲ್ ಪ್ಲಾಂಟ್ ನಲ್ಲಿನ ಕೇಸ್ ವಿಲೇವಾರಿ ಗೆ ಕ್ರಮ ಕೈಗೊಳ್ಳಲಾಗಿದ್ದು ಇನ್ನೆರಡು ವರ್ಷದಲ್ಲಿ 7 ಲಕ್ಷ ಟನ್ ಕಸ ತೆರವುಗೊಳಿಸಲಾಗುವುದು ಇದಕ್ಕಾಗಿ 60 ಕೋಟಿ ರೂಗಳ ಟೆಂಡರ್ ಅನ್ನು ನೀಡಲಾಗಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಕೆಆರ್ ಕ್ಷೇತ್ರದಲ್ಲಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ನಗರ ಪೆÇಲೀಸ್ ಕಮಿಷನರ್ ರಮೇಶ್ ಅವರೊಂದಿಗೆ ಮಾತುಕತೆ ನಡೆಸಿದ್ದು ಮುಂದಿನ ದಿನಗಳಲ್ಲಿ ಇಂತಹ ವರ್ತನೆಗಳು ನಡೆಯಬಾರದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಒಂದು ವೇಳೆ ಇಂತಹ ಘಟನೆಗಳು ನಡೆದಲ್ಲೇ ಆಯಾ ಠಾಣೆಯ ಇನ್ಸ್ಪೆಕ್ಟರ್ ಗಳನ್ನು ಹೊಣೆಗಾರರನ್ನಾಗಿ ಮಾಡಬೇಕೆಂದು ಆಯುಕ್ತರಲ್ಲಿ ಮನವಿ ಮಾಡಿರುವುದಾಗಿ ಅವರು ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ನನ್ನ ವೇಗಕ್ಕೆ ಸ್ಪಂದಿಸುತ್ತಿಲ್ಲ ಹಾಗಾಗಿ ಸೂಕ್ತವಾಗಿ ಕೆಲಸ ಮಾಡದವರನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸುವಂತೆ ನಾನು ಪಾಲಿಕೆ ಆಯುಕ್ತರಲ್ಲಿ ಮನವಿ ಮಾಡಿದ್ದೇನೆ ಎಂದು ಶಾಸಕ ಶ್ರೀವತ್ಸರ ಅವರು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರದಲ್ಲಿ ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಆರೋಪಿಸಿ ತಮ್ಮ ಕೆಆರ್ ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಮತ್ತೊಂದು ಕ್ಷೇತ್ರಕ್ಕೆ ಪಾಲಿಕೆ ಆಯುಕ್ತರು ವರ್ಗಾವಣೆ ಮಾಡಿರುವುದರಿಂದ ನಾನು ವಿಧಾನಸಭೆಯಲ್ಲಿ ಸ್ಪೀಕರ್ ಅವರ ಗಮನ ಸೆಳೆದಾಗ ಈ ಬಗ್ಗೆ ಒಂದು ಕ್ಷೇತ್ರಕ್ಕೆ ಮೀಸಲಾದ ಹಣವನ್ನು ಬೇರೊಂದು ಕ್ಷೇತ್ರಕ್ಕೆ ವರ್ಗಾಯಿಸಬಾರದೆಂದು ಅವರು ಸೂಚಿಸಿದ್ದು ಈ ಹಣ ಮುಂದಿನ ದಿನಗಳಲ್ಲಿ ತಮ್ಮ ಕ್ಷೇತ್ರಕ್ಕೆ ವಾಪಸ್ಸಾಗಲಿದೆ ಎಂದು ಅವರು ಹೇಳಿದರು
ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಗಳಾದ ಶಿವಕುಮಾರ್, ಸುನಂದ ಪಾಲನೇತ್ರ ಹಾಗೂ ಮುಖಂಡರುಗಳಾದ ಜೋಗಿ ಮಂಜು, ಅರಸು ಮತ್ತಿತರರು ಉಪಸ್ಥಿತರಿದ್ದರು