ಹತ್ಯೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ, ಮೇ 13: ಕೊಡುಗು ಜಿಲ್ಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೀನಾ ಹತ್ಯೆ ಖಂಡಸಿ ಹುಬ್ಬಳ್ಳಿಯ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಅಹಿಂದ ಒಕ್ಕೂಟ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೊಡುಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಮೀನಾ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮೀನಾ ಪ್ರಕರಣವು ವಿದ್ಯಾರ್ಥಿ ಸಮುದಾಯವನ್ನು ಭಯಗೊಳಿಸುವಂತಾಗಿದ್ದು, ಆರೋಪಿಗೆ ಕಠಿಣ ಶಿಕ್ಷಣಯಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಮುತ್ತಣ್ಣ ಶಿವಳ್ಳಿ, ರಾಜಶೇಖರ ಮೆಣಸಿನಕಾಯಿ, ಬಾಬಾಜಾನ್ ಮುಧೋಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.