ಶ್ರೀ ಶಂಕರಾಚಾರ್ಯರು ವಿದ್ಯೆಗೆ ಹೆಚ್ಚಿನ ಒತ್ತು ನೀಡಿದರು
ಸಂಜೆವಾಣಿ ನ್ಯೂಸ್
ಮೈಸೂರು.ಮೇ.13:- ವಿದ್ಯೆಯು ಆತ್ಮಜ್ಞಾನ ನಮ್ಮತನದ ಅರಿವೇ ವಿದ್ಯೆ ಆಗಿದೆ ಎಂಬುದನ್ನು ತಿಳಿಸಿದ್ದಾರೆ ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಪ್ರತಿಪಾದಿಸಿದರು.
ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀ ರಾಮ ಮಂದಿರದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಶ್ರೀ ಆದಿ ಗುರು ಶಂಕರಾಚಾರ್ಯರು, ಹಾಗೂ ಶ್ರೀ ರಾಮಾನುಜಾಚಾರ್ಯರ ಜಯಂತಿಯ ಅಂಗವಾಗಿ ಆಚಾರ್ಯತ್ರಯರದ ಶ್ರೀ ಶಂಕರ ಹಾಗೂ ಶ್ರೀ ರಾಮಾನುಜ ಮತ್ತು ಮಧ್ವಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು
ಭಾರತೀಯ ಪ್ರಜ್ಞಾ ಪರಂಪರೆಯಲ್ಲಿ ಶಿಖರಪ್ರಾಯವಾಗಿ ಕಾಣಿಸಿಕೊಂಡವರು ಆಚಾರ್ಯ ಶಂಕರರು ಭಾರತೀಯ ಚಿಂತನೆಯ ಮೂಲವೆನಿಸಿರುವ ವೇದಗಳ ಸಾರ ಬಗ್ಗೆ ಪ್ರತಿಪಾದಿಸಿದ್ದಾರೆ. ಜ್ಞಾನವೇ ಆತ್ಮಜ್ಞಾನ, ಬ್ರಹ್ಮಜ್ಞಾನ ಎಂಬುದನ್ನು ಆಚಾರ್ಯರ ಕಾಣಿಕೆಯ ಸಾರವಾಗಿದೆ ಎಂದು ಗಣ್ಯರು ಹೇಳಿದರು.
ಜಾತಿ, ಮತ, ವರ್ಗ, ಲಿಂಗ ಭೇದವಿಲ್ಲದೆ ಎಲ್ಲರೂ ಮುಕ್ತಿ ಮಾರ್ಗದಲ್ಲಿ ಹೋಗಬಹುದೆಂಬುದನ್ನು ಸಾರಿದವರು. ಕರ್ನಾಟಕಕ್ಕೂ ಆಗಮಿಸಿ ಸುಮಾರು 32 ವರ್ಷ ಈ ನಾಡಿನಾದ್ಯಂತ ಸಂಚರಿಸಿ ಭಕ್ತಿಯನ್ನು ಎಲ್ಲ ವರ್ಗದವರಿಗೂ ಪರಿಚಯಿಸಿದ ಸಂತರು. ಎಂದು ಹೇಳಿದರು
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ, ಗ್ರಾಮಾಂತರ ಅಧ್ಯಕ್ಷರಾದ ಗೋಪಾಲ್ ರಾವ್, ಓಂ ಶ್ರೀನಿವಾಸ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಕಡಕೋಳ ಜಗದೀಶ್, ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘದ ಕಾರ್ಯದರ್ಶಿ ಮಹೇಶ್ ಕುಮಾರ್, ಸಚಿಂದ್ರ, ನಾಗಶ್ರೀ, ಮಂಜುನಾಥ್, ಹಾಗೂ ಇನ್ನಿತರರು ಭಾಗವಹಿಸಿದ್ದರ.