ಜಗತ್ ವೃತ್ತದಲ್ಲಿ ಬುದ್ಧನ ಪ್ರತಿಮೆ ಸ್ಥಾಪಿಸಲು ಒತ್ತಾಯ
ಕಲಬುರಗಿ,ಮೇ.12-ನಗರದ ಜಗತ್ ವೃತ್ತದಲ್ಲಿ ಗೌತವi ಬುದ್ಧ ಪ್ರತಿಮೆ ಸ್ಥಾಪಿಸಿ ಜಗತ್À ವೃತ್ತಕ್ಕೆ ಬುದ್ಧ, ಬಸವ, ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡಬೇಕು ಎಂದು ಕರವೇ ಕಾವಲುಪಡೆ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಗತ್ ವೃತ್ತದಲ್ಲಿ ವಿಶ್ವಗುರು ಬಸವಣ್ಣ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಆದರೆ, ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಭಗವಾನ್ ಗೌತಮ ಬುದ್ಧನ ಪತ್ರಿಮೆಯನ್ನು ಸ್ಥಾಪಿಸಲು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡಿದಂತೆ ಜಗತ್ ವೃತ್ತದಲ್ಲಿ ಬುದ್ಧನ ಪ್ರತಿಮೆಯನ್ನು ಸ್ಥಾಪಿಸಿ ಈ ವೃತ್ತಕ್ಕೆ ಬುದ್ಧ, ಬಸವ, ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.