ದಂಡಗುAಡ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ವಾಡಿ: ಸೆ.೨೩:ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಚಿತ್ತಾಪುರ ತಾಲೂಕಿನ ದಂಡಗುAಡ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಬಾಲಕರ ವಿಭಾಗದ ೬೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ೭ನೇ ತರಗತಿ ವಿದ್ಯಾರ್ಥಿ ಚವಳಪ್ಪ ತಂದೆ ಮೋನಪ್ಪ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿ ಸಾಧನೆಗೆ ದಂಡಗುAಡ ಗ್ರಾಮದ ಗ್ರಾಮಸ್ಥರು, ಗ್ರಾಪಂ ಸದಸ್ಯರು, ಶಾಲಾ ಮೇಲುಸ್ತುವಾರಿ ಅಧ್ಯಕ್ಷರು, ಸದಸ್ಯರು, ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ.