ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಗುವಿವಿಯ ಇಬ್ಬರು ಪ್ರಾಧ್ಯಾಪಕರಿಗೆ ಸ್ಥಾನ
ಕಲಬುರಗಿ:ಸೆ.22: ಜಗತ್ತಿನ ಪ್ರತಿಷ್ಠಿತ ಅಮೆರಿಕ ದೇಶದ ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯ ವಾರ್ಷಿಕವಾಗಿ ಪ್ರಕಟಿಸುವ ವಿಶ್ವದ ಅತ್ಯುತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಇಬ್ಬರು ಪ್ರಾಧ್ಯಾಪಕರು ಸತತ ಎರಡು ವರ್ಷ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಗಣಿತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರೊ. ಸಿ. ಸುಲೋಚನಾ ಮತ್ತು ಪ್ರೊ. ಜೆ. ಸಿ. ಉಮಾವತಿ ವಿಶ್ವದರ್ಜೆಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು ಹಾಗೂ ಗುಣಮಟ್ಟದ ಸಂಶೋಧನಾ ಲೇಖನಗಳನ್ನು ವೆಬ್ ಆಫ್ ಸೈನ್ಸ್, ಸ್ಕೋಪಸ್, ಗೂಗಲ್ ಸ್ಕಾಲರ್, ಹೆಚ್ ಇಂಡೆಕ್ಸ್, ಇಂಪ್ಯಾಕ್ಟ್ ಪ್ಯಾಕ್ಟರ್ ಹಾಗೂ ಸೈಟೇಶನ್ ಹೀಗೆ ಹಲವಾರು ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಶೇ. 2ರಷ್ಟು ಅತ್ಯುತ್ತಮ ಸಂಶೊಧಕರನ್ನು ಗುರುತಿಸಿರುವ ಜಾಗತಿಕ ಮಟ್ಟದ ಎಲ್ಸವಿಯರ್ ಸಂಸ್ಥೆಯು ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯ ಸಹಭಾಗಿತ್ವದಲ್ಲಿ ಸರ್ವೆ ನಡೆಸಿ ಜಾಗತಿಕ ವಿಜ್ಞಾನಿಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿದೆ.
ಜಾಗತಿಕ ಮಟ್ಟದ ಎಲ್ಸವಿಯರ್ ಸಂಸ್ಥೆಯು ನಡೆಸಿದ ಸಂಶೋಧನಾ ಸರ್ವೇಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಪ್ರೊ. ಸಿ. ಸುಲೋಚನಾ ಹಾಗೂ ಪ್ರೊ. ಜೆ. ಸಿ. ಉಮಾವತಿ ಇವರು ಸತತ ಎರಡು ವರ್ಷಗಳು ಉತ್ಕøಷ್ಟ ಸಂಶೋಧನೆ ಮತ್ತು ಗುಣಮಟ್ಟದ ಪ್ರಕಟಣೆಯಿಂದ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಗುಲಬರ್ಗಾ ವಿಶ್ವವಿದ್ಯಾಲಯದ ಕೀರ್ತಿ ಹೆಚ್ಚಿಸಿದೆ. ಈ ಇಬ್ಬರು ವಿಜ್ಞಾನಿಗಳ ಸಾಧನೆಯು ನಮ್ಮ ವಿಶ್ವವಿದ್ಯಾಲಯದ ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಸಾಧನೆ ಕೈಗೊಳ್ಳಲು ಪ್ರೇರಣೆ ಬಂದಂತಾಗಿದೆ. ವಿಶ್ವವಿದ್ಯಾಲಯದ ಪರವಾಗಿ ಇಬ್ಬರು ವಿಜ್ಞಾನಿಗಳಿಗೆ ಅಭಿನಂದನೆಗಳು.