ತಪ್ಪಿದ ಟಿಕೆಟ್, ರಘುಪತಿ ವಿಚಲಿತ
ಬೆಂಗಳೂರು, ಮೇ ೧೨-ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯನ್ನು ಪ್ರಕಟಿಸಿದ
ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಟಿಕೆಟ್ ಕೈ ತಪ್ಪಿರುವ ಮಾಜಿ ಶಾಸಕ ರಘುಪತಿ ಭಟ್ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಪತಿ ಭಟ್ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ವಿಚಲಿತನಾಗಿದ್ದೇನೆ. ಈ ಹಿಂದೆ ವಿಧಾನಸಭೆಯ ಟಿಕೆಟ್‌ನ್ನು ತಮಗೆ ಮಾಹಿತಿ ನೀಡದೆ ತಪ್ಪಿಸಲಾಯಿತು. ಆಗ ವಿಧಾನ ಪರಿಷತ್ತಿನ ಪದವೀಧರ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ, ಟಿಕೆಟ್ ನೀಡದಿರುವುದಕ್ಕೆ ಬೇಸರವಾಗಿದೆ ಎಂದು ಅವರು ಹೇಳಿದ್ದಾರೆ.
ಪಕ್ಷ ತೆಗೆದುಕೊಂಡಿರುವ ನಿಲುವಿನಿಂದ ವಿಚಲಿತನಾಗಿದ್ದೇನೆ.ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ ಎಂದು ಬರೆದುಕೊಂಡಿದ್ದಾರೆ.
ಕರಾವಳಿ ಭಾಗಕ್ಕೆ ನೀಡುತ್ತಿದ್ದ ಟಿಕೆಟ್‌ನ್ನು ಶಿಕ್ಷಕರ ಕ್ಷೇತ್ರಕ್ಕೆ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದಂತಾಗಿದೆ. ಪ್ರಸ್ತು
ತ ಸ್ಥಿತಿಯಲ್ಲಿ ಬಿಜೆಪಿ ನಿಲುವಿನಿಂದ ವಿಚಲಿತನಾಗಿದ್ದೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
೧೯೯೪ ರಿಂದಲೂ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥಳಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ ಮೂರು ಬಾರಿಯೂ ಗೆದ್ದಿದ್ದೇನೆ. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತೆಂದು ಬೇಸರ ವ್ಯಕ್ತಪಡಿಸಿರುವ ಅವರು, ವಿಧಾನ ಪರಿಷತ್ತಿನ ಪದವೀಧರ ಕ್ಷೇತ್ರದ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಅದರಂತೆ ಸದಸ್ಯತ್ವ ಅಭಿಯಾನದಂತೆ ಭಾಗಿಯಾಗಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು ೪೦ ದಿನಗಳ ಕಾಲ ಶಿವಮೊಗ್ಗದಲ್ಲೇ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿ ದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ.