ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಬಸವ ಜಯಂತಿ
ವಿಜಯಪುರ,ಮೇ.11:ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಬಸವ ಜಯಂತಿಯನ್ನು, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲ, ಅವರು ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ, ವಿವಿಧ ವಿಭಾಗಗಳ ಅಧ್ಯಾಪಕರು ಮತ್ತಿತರರು ಇದ್ದಾರೆ.