ಎಲೆಬೇತೂರಿನಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೧೧: ತಾಲೂಕಿನ ಎಲೆ ಬೇತೂರು ಗ್ರಾಮದಲ್ಲಿ ವಿಶ್ವಗುರು, ಸಾಂಸ್ಕೃತಿಕನಾಯಕ ಬಸವೇಶ್ವರ ಜಯಂತಿ ಅಂಗವಾಗಿ ಗ್ರಾಮದ ಶ್ರೀ ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.  ಬಾಳೆಕಂಬ ಮಾವಿನ ತೋರಣ ಪುಷ್ಪ ಅಲಂಕೃತ ಟ್ಯಾಕ್ಟರ್ ಯೊಂದಿಗೆ ವಿಶ್ವಗುರು ಶ್ರೀ ಬಸವೇಶ್ವರ ಮೂರ್ತಿ ಮೆರವಣಿಗೆ ವಿವಿಧ ಸಾಂಸ್ಕೃತಿಕ ವೀರಗಾಸೆ, ಸಮಾಳ ಕಲಾತಂಡಗಳೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆದು ನಂತರ ಶ್ರೀ ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಶ್ರೀ ಬಸವೇಶ್ವರ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪುಷ್ಪಾಲಂಕಾರ ಮಾಡಿ ಮಹಾಮಂಗಳಾರತಿ ಮಾಡಲಾಯಿತು. ನಂತರ ಸರ್ವ ಬಸವ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು ಈ ಎಲ್ಲಾ ಕಾರ್ಯಕ್ರಮವನ್ನು ಶ್ರೀ ಬಸವೇಶ್ವರ ಯುವಕ ಸಂಘ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ನಡೆಯಿತು.