ಜಗಜ್ಯೋತಿ ಬಸವೇಶ್ವರ, ಹೇಮರಡ್ಡಿ ಮಲ್ಲಮ್ಮ ಜಯಂತಿ
ಸಂಜೆವಾಣಿ ವಾರ್ತೆ
ವಿಜಯನಗರ, ಮೇ.11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಹಾಗೂ ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹಾಗೂ ಎಸ್ಪಿ ಶ್ರೀಹರಿಬಾಬು ಅವರು ನಗರದ ಬಸವೇಶ್ವರ ವೃತ್ತದಲ್ಲಿನ ಶ್ರೀ ಬಸವೇಶ್ವರರ ಪುತ್ಥಳಿಗೆ ಹೂಮಾಲೆ ಹಾಕಿ ನಮಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಬಸವೇಶ್ವರರ ಮತ್ತು ಶಿವಶರಣೆ ಶ್ರೀ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣನವರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.