ಲೈಗಿಂಕ ಪ್ರಕರಣದಲ್ಲಿ ರಾಜಕೀಯ ಬೇಡ: ಜವರಪ್ಪ
ಸಂಜೆವಾಣಿ ನ್ಯೂಸ್
ಮೈಸೂರು: ಮೇ.11:- ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮಾನಹಾನಿ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಎಲ್ಲರೂ ಪಕ್ಷಾತೀತವಾಗಿ ಶ್ರಮಿಸಲಿ ಎಂದು ಅಹಿಂದ ಬಳಗದ ಮುಖಂಡ ಅಹಿಂಧ ಜವರಯ್ಯ ಮನವಿ ಮಾಡಿದರು.
ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಈ ಲೈಂಗಿಕ ದೌರ್ಜನ್ಯ ಪ್ರಕರಣ ಇಡೀ ದೇಶದಲ್ಲಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಗಮನ ಸೆಳೆದಿದೆ. ಆದರೆ ಆ ನಂತರದ ಬೆಳವಣಿಗೆಗಳು ಬೇಸರವುಂಟು ಮಾಡುವಂತಿವೆ. ವಿಷಯದಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ. ಪ್ರತಿಭಟನೆ ಹೆಸರಿನಲ್ಲಿ ಲೈಂಗಿಕ ದೌರ್ಜನ್ಯ ವಿಷಯವನ್ನು ಮರೆಗೆ ಸರಿಸುವ ಯತ್ನ ನಡೆದಿದೆ ಎಂದು ಬೇಸರಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಅನಗತ್ಯವಾಗಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಎಳೆದು ತರುತ್ತಿರುವುದು ಸರಿಯಲ್ಲ. ಈಗ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರು ಈ ಹಿಂದೆ ಧರಿಸಿದ್ದ ಕೈಗಡಿಯಾರ, ರಾಕೇಶ್ ಸಿದ್ದರಾಮಯ್ಯ ಅವರ ಸಾವಿನ ಪ್ರಕರಣಗಳ ಬಗ್ಗೆ ಮಾತನಾಡುತ್ತಿರುವುದು ಖಂಡನೀಯವಾಗಿದೆ. ಜೊತೆಗೆ, ಸಿದ್ದರಾಮಯ್ಯ ಅವರು ಎಂದಿಗೂ ಕುಮಾರಸ್ವಾಮಿ ಅವರ ವೈಯಕ್ತಿಕ ವಿಷಯದ ಬಗ್ಗೆ ಮಾತನಾಡಿಲ್ಲ. ಇದನ್ನು ಕುಮಾರಸ್ವಾಮಿ ಗಮನಿಸಬೇಕೆಂದರು.
ಇದೇ ವೇಳೆ ಜೆಡಿಎಸ್ ಮಹಿಳಾ ಕಾರ್ಯಕರ್ತರು ಹಾಗೂ ಇನ್ನಿತರ ಜನಪ್ರತಿನಿಧಿಗಳು ಈಗ ಪ್ರಕರಣದಲ್ಲಿ ಸಂತ್ರಸ್ತರಾಗಿರುವವರಿಗೆ ನ್ಯಾ ದೊರಕಿಸಿಕಡೊಬೇಕೆಂದು ಮನವಿ ಮಾಡಿದರು.
ಉತ್ತನಹಳ್ಳಿ ಶಿವಣ್ಣ, ಹರೀಶ್ ಬಾಬು, ಮಹೇಶ್ ಸೋಸಲೆ, ಸಚಿನ್, ಸೋಮಯ್ಯ ಮಲೆಯೂರು ಹಾಜರಿದ್ದರು.